ಯುಜಿಸಿ ಮಾರ್ಗಸೂಚಿಯಂತೆ ರಾಜ್ಯದಲ್ಲೂ ಇಂಜಿನಿಯರಿಂಗ್, ಪದವಿ, ಡಿಪ್ಲೊಮಾದ ಅಂತಿಮ ಸೆಮಿಸ್ಟರ್ ಪರೀಕ್ಷೆ : ಡಾ| ಅಶ್ವತ್ಥ ನಾರಾಯಣ್

0
228
Tap to know MORE!

ಮಹಾಮಾರಿ ಕೋವಿಡ್- 19 ಭೀತಿಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. 2019-20ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರಿ ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್ (intermediate Semester) ವಿದ್ಯಾರ್ಥಿಗಳನ್ನು ಸೆಮಿಸ್ಟರ್ ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸುವುದಾಗಿ ಪ್ರಕಟಿಸಿದೆ. ಆದರೆ, ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್‌ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯುಜಿಸಿ ಮಾರ್ಗಸೂಚಿಯಂತೆ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಲೂ ನಿರ್ಧರಿಸಿದೆ.

ವಿವಿಗಳ ಕುಲಪತಿಗಳ ಜತೆ ನಿರಂತರ ಸಮಾಲೋಚನೆ ನಡೆಸಿದ ಶಿಕ್ಷಣ ತಜ್ಞರು, ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯವನ್ನು ಗಣನೆಗೆ ತೆಗೆದುಕೊಂಡು ಈ ಮಹತ್ವದ ನಿರ್ಧಾರ ಕೈಕೊಳ್ಳಲಾಗಿದೆ. ಈ ನಿರ್ಧಾರ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ (2019-20) ಮಾತ್ರ ಸೀಮಿತವಾಗಿರುತ್ತದೆ. ಸರಕಾರದ ಈ ನಿರ್ಧಾರಕ್ಕೆ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ವಜೂಭಾಯಿ ವಾಲ ಅವರು ಹಸಿರು ನಿಶಾನೆ ತೋರಿಸಿದ್ದಾರೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಶುಕ್ರವಾರ ಇಲ್ಲಿ ಟ್ವಿಟ್ಟರ್ ನಲ್ಲಿ ಸ್ಪಷ್ಟಪಡಿಸಿದ್ದಾರೆ ತಿಳಿಸಿದರು.

ಕೋವಿಡ್ ಇಡೀ ಶೈಕ್ಷಣಿಕ ವ್ಯವಸ್ಥೆಯನ್ನು ಬುಡಮೇಲು ಮಾಡಿದೆ. ಸಕಾಲಕ್ಕೆ ತರಗತಿಗಳು ನಡೆಸಲು ಸಾಧ್ಯವಾಗಲಿಲ್ಲ. ಲಾಕ್‌ಡೌನ್‌ ಸಂದರ್ಭದಲ್ಲಿ ಆನ್‌ಲೈನ್‌ ಮೂಲಕ ಶಿಕ್ಷಣ ನೀಡಿದ್ದು, ಒಳ್ಳೆಯ ಪ್ರತಿಕ್ರಿಯೆ ಕೂಡ ಬಂದಿದೆ. ಸಾಧ್ಯವಾದಷ್ಟು ಎಲ್ಲರನ್ನೂ ತಲುಪಲು ಪ್ರಾಮಾಣಿಕ ಪ್ರಯತ್ನ ನಡೆಸಲಾಯಿತು. ಇದರ ನಡುವೆ ಕೆಲವು ದಿನಗಳು ತರಗತಿಗಳನ್ನು ನಡೆಸಿ, ಪರೀಕ್ಷೆ ಮಾಡುವ ಚಿಂತನೆಯೂ ಇತ್ತು. ಆದರೆ, ಕೋವಿಡ್‌ ವ್ಯಾಪಕವಾಗಿ ಹಬ್ಬುತ್ತಿರುವ ಕಾರಣಕ್ಕೆ ಅವೆಲ್ಲವನ್ನೂ ಕೈಬಿಟ್ಟು ಮಧ್ಯಂತರ ಸೆಮಿಸ್ಟರ್‌/ವರ್ಷದ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲು ನಿರ್ಧರಿಸಲಾಯಿತು. ಅಂತಿಮ ವರ್ಷ/ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ, ಸೆಪ್ಟೆಂಬರ್‌ ತಿಂಗಳ ಅಂತ್ಯದೊಳಗೆ ಪರೀಕ್ಷೆಗಳನ್ನು (ಆನ್‌ಲೈನ್‌/ಆಪ್‌ಲೈನ್‌) ನಡೆಸಲು ಆಯಾ ವಿಶ್ವವಿದ್ಯಾಲಯಗಳಿಗೇ ಸೂಚಿಸಲಾಗಿದೆ ಎಂದು ಅವರು ವಿವರಿಸಿದರು.

LEAVE A REPLY

Please enter your comment!
Please enter your name here