ಸೆಪ್ಟೆಂಬರ್ 30 ರೊಳಗೆ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸಲು ಕಡ್ಡಾಯಗೊಳಿಸಿರುವ ವಿಶ್ವವಿದ್ಯಾಲಯ ಧನಸಹಾಯ ಆಯೋಗದ (ಯುಜಿಸಿ) ಪರಿಷ್ಕೃತ ಮಾರ್ಗಸೂಚಿಗಳನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ನಾಳೆ(ಆಗಸ್ಟ್ 26) ಬೆಳಗ್ಗೆ 10.30ಕ್ಕೆ ತನ್ನ ತೀರ್ಪನ್ನು ಪ್ರಕಟಿಸಲಿದೆ.

ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್ ಸುಭಾಷ್ ರೆಡ್ಡಿ ಮತ್ತು ಎಂ.ಆರ್.ಶಾ ಅವರ ನ್ಯಾಯಪೀಠವು ಮೂರು ದಿನಗಳವರೆಗೆ ವಿಸ್ತೃತ ವಿಚಾರಣೆಯ ನಂತರ ಈ ವಿಷಯದಲ್ಲಿ ತನ್ನ ತೀರ್ಪನ್ನು ಕಾಯ್ದಿರಿಸಿತ್ತು.
ಇದನ್ನೂ ನೋಡಿ : ಎಲ್ಲಾ ವಿದ್ಯಾರ್ಥಿಗಳ ಚಿತ್ತ ಸುಪ್ರೀಂಕೋರ್ಟ್ನತ್ತ
ಯುಜಿಸಿ ತನ್ನ ಪರಿಷ್ಕೃತ ಮಾರ್ಗಸೂಚಿಗಳಲ್ಲಿ, ಕಾರ್ಯವಿಧಾನವನ್ನು ಅನುಸರಿಸಿ ಅಂತಿಮ ವರ್ಷದ ಪರೀಕ್ಷೆಗಳನ್ನು ಕೋವಿಡ್-19 ಸಾಂಕ್ರಾಮಿಕದ ಮಧ್ಯೆ ನಡೆಸಬೇಕೆಂದು ಆದೇಶಿಸಿದೆ.
ಆದಾಗ್ಯೂ, ಕೋವಿಡ್ -19 ಸಾಂಕ್ರಾಮಿಕ ರೋಗವು ನಿರಂತರವಾಗಿ ಹದಗೆಡುತ್ತಿರುವ ಹಿನ್ನೆಲೆಯಲ್ಲಿ, ಕೆಲವು ರಾಜ್ಯ ಸರ್ಕಾರಗಳು ಈಗಾಗಲೇ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ರದ್ದುಗೊಳಿಸಿತ್ತು.
ಯುಜಿಸಿಯ ಮಾರ್ಗಸೂಚಿಗಳು ವಿದ್ಯಾರ್ಥಿಗಳು ಮಾತ್ರವಲ್ಲ, ಶಿಕ್ಷಕರ ಸಂಘಗಳು ಮತ್ತು ರಾಜಕೀಯ ಪಕ್ಷಗಳ ಯುವ ವಿಭಾಗಗಳೂ ಸಹ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.