ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಪದಗ್ರಹಣದ ಬಳಿಕ ಈಗ ರಾಜ್ಯ ಕಾಂಗ್ರೆಸ್ನಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷರ ಗಾದಿ ಮೇಲೆ ದೊಡ್ಡವರ ಮಕ್ಕಳ ಕಣ್ಣು ಬಿದ್ದಿದ್ದು, ಹಿರಿಯ್ಕ್ ನಾಯಕರೂ ತಮ್ಮ ಮಕ್ಕಳನ್ನು ಅಧ್ಯಕ್ಷರನ್ನಾಗಿಸುವ ಕಸರತ್ತು ನಡೆಸುತ್ತಿದ್ದಾರೆ.
ರಾಹುಲ್ ಗಾಂಧಿ ಎಐಸಿಸಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಯುವ ಕಾಂಗ್ರೆಸ್ ಘಟಕಕ್ಕೆ ಚುನಾವಣಾ ವ್ಯವಸ್ಥೆ ಜಾರಿಯಾಗಿತ್ತು. ಇದೀಗ ಚುನಾವಣೆಯಿಂದ ಗುಂಪುಗಾರಿಕೆ ಹೆಚ್ಚುತ್ತದೆ ಎಂಬ ಕಾರಣಕ್ಕೆ ನೇರ ನೇಮಕ ಮಾಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ಇದಕ್ಕಾಗಿ ಹಲವಾರು ಕಸರತ್ತು ನಡೆಸಿದ್ದಾರೆ.
ಮಾಜಿ ಶಾಸಕ ಕೆ. ಎನ್ ರಾಜಣ್ಣ ಪುತ್ರ ರಾಜೇಂದ್ರ, ರಾಮಲಿಂಗಾ ರೆಡ್ಡಿ ಪುತ್ರಿ ಶಾಸಕಿ ಸೌಮ್ಯ ರೆಡ್ಡಿ, ದ. ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಎನ್. ಎನ್.ಯು.ಐ ಅಧ್ಯಕ್ಷ ಮಂಜುನಾಥ್ ಹಾಗೂ ರಕ್ಷಾ ರಾಮಯ್ಯ, ಶಾಸಕ ಎನ್ ಈ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಅವರ ಹೆಸರುಗಳು ಮುಂಚೂಣಿಯಲ್ಲಿವೆ