“ಜಯ ಯಾರಿಗೆ ಎಂದು ನೋಡೇ ಬಿಡೋಣ” – ಪಬ್ಲಿಕ್ ಟಿವಿ‌ಗೆ ಬಹಿರಂಗ ಸವಾಲು ಹಾಕಿದ ರಕ್ಷಿತ್ ಶೆಟ್ಟಿ

0
213
Tap to know MORE!

ಬೆಂಗಳೂರು: ತಮ್ಮ ತೇಜೋವಧೆ ಮಾಡುವಂತಹ ಕಾರ್ಯಕ್ರಮ ಪ್ರಸಾರ ಮಾಡಿದ ಕನ್ನಡದ ಸುದ್ದಿವಾಹಿನಿ ವಿರುದ್ಧ ನಟ ರಕ್ಷಿತ್ ಶೆಟ್ಟಿ ಆಕ್ರೋಶ ಹೊರ ಹಾಕಿದ್ದಾರೆ ಹಾಗೂ ಆ ವಾಹಿನಿಗೆ ಬಹಿರಂಗ ಸವಾಲು ಎಸೆದಿದ್ದಾರೆ.

ಈ ಬಗ್ಗೆ ಇಂದು ಟ್ವೀಟ್ ಮಾಡಿರುವ ಅವರು, ‘ನಿಮ್ಮ ಬಳಿ  ಇರುವ ಅಸ್ತ್ರ’ಟಿಆರ್‌ಪಿ’ ಗೋಸ್ಕರ ನಡೆಸುತ್ತಿರುವ ಒಂದು ನ್ಯೂಸ್ ಚಾನೆಲ್. ನನ್ನ ಬಳಿ ಇರುವ ಅಸ್ತ್ರ ಕೆಲಸದ ಮೇಲಿರೋ ನನ್ನ ಶ್ರದ್ಧೆ, ಜೀವನದಲ್ಲಿ ಅಳವಡಿಸಿಕೊಂಡಿರುವ ನೀತಿ, ನನ್ನ ಸಿನಿಮಾ ಹಾಗೂ ಜನಬೆಂಬಲ. ಇವೆರಡರಲ್ಲಿ ಜಯ ಯಾರಿಗೆ ಎಂದು ನೋಡಿ ಬಿಡೋಣ’ ಎಂದು ಗುಡುಗಿದ್ದಾರೆ.

ಸ್ವಿಸ್ ಬ್ಯಾಂಕ್| 2020ರಲ್ಲಿ ಭಾರತೀಯರ ಫಂಡ್ ₹20 ಸಾವಿರ ಕೋಟಿಗೆ ಏರಿಕೆ!

ನನ್ನ ವೃತ್ತಿ ಜೀವನದಲ್ಲಿ ಯಾರೆಲ್ಲ ನನ್ನ ಜೊತೆ ಕೆಲಸ ಮಾಡಿದ್ದಾರೋ, ಅವರಲ್ಲಿ ಶೇಕಡಾ 90 ರಷ್ಟು ಜನ ಇಂದಿಗೂ ನನ್ನ ಜೊತೆಯಲ್ಲೇ ಇರುವರು. ಬಿಟ್ಟು ಹೋದವರು ನನ್ನಿಂದ ನನ್ನ ಕೆಲಸದಿಂದ ಏನಾದರೂ ಪಡೆದುಕೊಂಡು ಹೋಗಿದ್ದಾರೆ ಹೊರತು ಯಾರೂ ಕಳೆದುಕೊಂಡು ಹೋಗಿಲ್ಲ. ಕಳೆದುಕೊಂಡವರಿಗೆ ಮುಂದೆ ಹೋಗಿ ಸಹಾಯ ಮಾಡಿದ್ದೇನೆ. ಅಥವಾ ಅವರಿಗೆ ಭುಜ ಕೊಟ್ಟು ನಿಂತಿದ್ದೇನೆ. ಇದಕ್ಕೆ ನನ್ನ ಜೊತೆ ಕೆಲಸ ಮಾಡಿದ ಪ್ರತಿಯೊಬ್ಬ ಲೈಟ್ ಆಪರೇಟರ್ ನಿಂದ ಹಿಡಿದು ಟೆಕ್ನಿಷಿಯನ್ ಡೈರೆಕ್ಟರ್ ಹಾಗೂ ಪ್ರತಿಯೊಬ್ಬ ಪ್ರೊಡ್ಯೂಸರ್ ಸಾಕ್ಷಿ. ನಾನು ಇದೆಲ್ಲದರ ಬಗ್ಗೆ ಎಲ್ಲಿಯೂ ಮಾತಾಡಲು ಬಯಸುವುದಿಲ್ಲ. ನನಗೆ ಅದರ ಅಗತ್ಯವೂ ಇಲ್ಲ. ಹಾಗಂತ ನಿಜ ಸುಳ್ಳಾಗಲ್ಲ ಎಂದಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಖಾಸಗಿ ವಾಹಿನಿಯವರು ಕಳೆದ ಎರಡು ವರ್ಷಗಳಲ್ಲಿ ನನ್ನ ಬಗ್ಗೆ ಈ ರೀತಿಯ ಹಲವಾರು ಕಾರ್ಯಕ್ರಮ ಮಾಡಿದ್ದಾರೆ. ನಾನು ಈ ಎಲ್ಲ ತೇಜೋವಧೆಯ ಪ್ರಯತ್ನಗಳನ್ನು ನಿರ್ಲಕ್ಷ್ಯಿಸುತ್ತ ಬಂದಿದ್ದೆ. ಕಾರಣ ಇದಕ್ಕೆಲ್ಲ ನನ್ನ ಕೆಲಸ ಉತ್ತರ ಕೊಡುತ್ತದೆ ಎನ್ನುವ ನಂಬಿಕೆ ಇತ್ತು ಎಂದು ಹೇಳಿದರು. ಹತ್ತು ದಿನಗಳ ಬಳಿಕ ಉತ್ತರ ಕೊಡುತ್ತೇನೆ. ಸತ್ಯ ಕಟುವಾಗಿ ಇರುತ್ತದೆ  ಜುಲೈ 11 ರಂದು ಆ ಸತ್ಯ ಹೊರಬರಲಿದೆ ಎಂದು ಸವಾಲು ಹಾಕಿದ್ದಾರೆ.

LEAVE A REPLY

Please enter your comment!
Please enter your name here