“ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ” : ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್

0
144
Tap to know MORE!

ಕೋಲಾರ : ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಗೌರವಯುತವಾಗಿ ಸಕ್ರಿಯ ರಾಜಕಾರಣದಿಂದ ನಿವೃತ್ತನಾಗುತ್ತೇನೆ ಎಂಬುದಾಗಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳುವ ಮೂಲಕ, ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದಾರೆ.

ನಗರದಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆ ಸಂಬಂಧ ನಡೆದಂತ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸ್ವೀಕರ್ ರಮೇಶ್ ಕುಮಾರ್, ರಾಜ್ಯದಲ್ಲಿ ರಾಜಕೀಯ ವ್ಯವಸ್ಥೆಯೇ ಕಲುಷಿತಗೊಂಡಿದೆ. ಇಂದು ರಾಜಕಾರಣದಲ್ಲಿ ಮೌಲ್ಯಗಳು ಉಳಿದಿಲ್ಲ ಎಂಬುದಾಗಿ ವಿಷಾದ ವ್ಯಕ್ತ ಪಡಿಸಿದರು.

ಇದನ್ನೂ ಓದಿ:ಬೆಂಗಳೂರು: ಕುಡಿತದ ಅಮಲಿನಲ್ಲಿ ಪೋಲೀಸರ ಮೇಲೆ ಹಲ್ಲೆ | ಎಂಎಲ್‌ಸಿ ನಾಸಿರ್ ಅಹಮದ್ ಪುತ್ರನ ಬಂಧನ!

ಇನ್ನೂ ಮುಂದುವರೆದು ಮಾತನಾಡಿದ ಅವರು, ರಾಜಕೀಯ ಜೀವನದಲ್ಲಿ ಇಷ್ಟು ವರ್ಷ ನ್ಯಾಯಯುತವಾಗಿ ಬದುಕಿದ್ದೇನೆ. ಹಣ ತೆಗೆದುಕೊಂಡು ರಾಜಕೀಯ ಮಾಡಿಲ್ಲ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಪಕ್ಷದ ಕೆಲವರು ಹಣಕ್ಕೆ ತಲೆ ಮಾರಿಕೊಂಡು ಬಿಜೆಪಿಗೆ ಹೋದ್ರು. ತಾಯಿಯಂತಿರುವ ಪಕ್ಷಕ್ಕೆ ದ್ರೋಹ ಮಾಡಿದ್ರು. ಅಧಿಕಾರದಾಸೆಗೆ ಅನೈತಿಕ ರಾಜಕಾಣ ಮಾಡುತ್ತಿದ್ದಾರೆ ಎಂದ ಅವರು, ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಗೌರವಯುತವಾಗಿ ಸಕ್ರೀಯ ರಾಜಕಾರಣದಿಂದ ನಿವೃತ್ತನಾಗುತ್ತೇನೆ ಎಂಬುದಾಗಿ ರಾಜಕೀಯ ನಿವೃತ್ತಿ ಘೋಷಿಸಿದರು.

LEAVE A REPLY

Please enter your comment!
Please enter your name here