ರಾಜ್ಯದಲ್ಲಿ ಏಕದಿನ ಗರಿಷ್ಟ : 1,694 ಸೋಂಕಿತರ ವರದಿ

0
69

ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರಿದಿದ್ದು, ಇಂದು ಒಂದೇ ದಿನ 1,694 ಜನರಲ್ಲಿ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 18,016ಗೆ ಏರಿದೆ. ಇವುಗಳ ಪೈಕಿ, 10,604 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 10 ಸಾವಿರ ದಾಟಿದೆ.

ರಾಷ್ಟ್ರಕ್ಕೆ ಮಾದರಿ ನಗರವಾಗಿದ್ದ ಬೆಂಗಳೂರಿನಲ್ಲಿ ಇಂದು 994 ಸೋಂಕಿತರ ವರದಿಯಾಗಿದ್ದು, ಇದರಿಂದಾಗಿ ನಗರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 6,297 ಗೆ ಏರಿದೆ. ಬಳ್ಳಾರಿ (552), ದಕ್ಷಿಣ ಕನ್ನಡ (507) ಮತ್ತು ಕಲಬುರ್ಗಿ (395) ಸಕ್ರಿಯ ಪ್ರಕರಣಗಳ ಲೆಕ್ಕಾಚಾರದಲ್ಲಿ ನಂತರದ ಸ್ಥಾನದಲ್ಲಿದೆ. ರಾಜ್ಯದ ಇತರ ಯಾವುದೇ ಜಿಲ್ಲೆಗಳಲ್ಲೂ ಈಗ 300ಕ್ಕೂ ಅಧಿಕ ಸಕ್ರಿಯ ಪ್ರಕರಣಗಳು ಇಲ್ಲ.

ಅದಲ್ಲದೆ ರಾಜ್ಯದಲ್ಲಿ ಸಾವಿರ ಸೋಂಕಿತರ ಜಿಲ್ಲೆಗಳ ಸಂಖ್ಯೆ ಐದಕ್ಕೇರಿದೆ. ಬೆಂಗಳೂರು ನಗರ, ಉಡುಪಿ ಮತ್ತು ಕಲಬುರ್ಗಿಯೊಂದಿಗೆ ಇದೀಗ ದಕ್ಷಿಣ ಕನ್ನಡ ಮತ್ತು ಬಳ್ಳಾರಿ ಹೊಸ ಸೇರ್ಪಡೆಯಾಗಿದೆ.

ಇಂದಿನ ವರದಿಯಲ್ಲಿ ರಾಜ್ಯ ರಾಜಧಾನಿಯನ್ನು ಹೊರತುಪಡಿಸಿ, ಬಳ್ಳಾರಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲಾ 97 ಸೋಂಕಿತರು ಮತ್ತು ಕಲಬುರ್ಗಿ ಜಿಲ್ಲೆಯಲ್ಲಿ 72 ಸೋಂಕಿತರ ಪತ್ತೆಯಾಗಿ ನಂತರದ ಸ್ಥಾನದಲ್ಲಿದೆ.

ಅದಲ್ಲದೆ, ಇಂದು ರಾಜ್ಯದಲ್ಲಿ ಒಟ್ಟು 471 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. ರಾಜ್ಯದಲ್ಲಿ ಇದುವರೆಗೆ, ಒಟ್ಟು 8,805 ಸೋಂಕಿತರು ಗುಣಮುಖರಾಗಿದ್ದಾರೆ.

ರಾಜ್ಯಾದ್ಯಂತ ಕೊರೋನಾ ತನ್ನ ಮರಣ ಮೃದಂಗವನ್ನೂ ಮುಂದುವರೆಸಿದ್ದು, ಇಂದು 21 ಮಂದಿಯನ್ನು ಬಲಿ ತೆಗೆದುಕೊಂಡಿದೆ. , ಬೆಂಗಳೂರು ನಗರ 5, ಕಲಬುರ್ಗಿ, ಚಿಕ್ಕಬಳ್ಳಾಪುರದ ತಲಾ 3, ಶಿವಮೊಗ್ಗ, ವಿಜಯಪುರ ತಲಾ 2, ಹಾಸನ, ಬೀದರ್, ರಾಯಚೂರು, ದಾವಣಗೆರೆ, ಬಳ್ಳಾರಿ ಮತ್ತು ಬೆಂಗಳೂರು ಗ್ರಾಮಾಂತರದ ತಲಾ 1 ಸೋಂಕಿತರು ಸಾವನ್ನಪ್ಪಿದ್ದಾರೆ.

LEAVE A REPLY

Please enter your comment!
Please enter your name here