ರಾಜ್ಯದಲ್ಲಿ ಒಂದೇ ದಿನ 70 ಸೋಂಕಿತರು ಬಲಿ!

0
48

ರಾಜ್ಯಾದ್ಯಂತ ಕೊರೋನಾ ತನ್ನ ಮರಣ ಮೃದಂಗವನ್ನು ಮುಂದುವರೆಸಿದ್ದು, ಇಂದು ದಾಖಲೆಯ 70 ಸೋಂಕಿತರನ್ನು ಬಲಿ ತೆಗೆದುಕೊಂಡಿದೆ. ರಾಜ್ಯದಲ್ಲಿ ಇದುವರೆಗೆ 613 ಸೋಂಕಿತರು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು ಬೆಂಗಳೂರಿನ 1,533 ಸೇರಿದಂತೆ, ರಾಜ್ಯದಲ್ಲಿ ಸತತ ನಾಲ್ಕನೇ ದಿನ 2 ಸಾವಿರಕ್ಕೂ ಅಧಿಕ ಸೋಂಕಿತರ ವರದಿಯಾಗಿದೆ. ಇಂದು ದಾಖಲೆಯ 2,797 ಸೇರಿದಂತೆ, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 36,216 ಗೆ ಏರಿಕೆಯಾಗಿದ್ದು, 20,833 ಸಕ್ರಿಯ ಪ್ರಕರಣಗಳಿವೆ.

ರಾಷ್ಟ್ರಕ್ಕೆ ಮಾದರಿ ನಗರವಾಗಿದ್ದ ಬೆಂಗಳೂರಿನಲ್ಲಿ ಪ್ರತಿದಿನ ಸಾವಿರಕ್ಕೂ ಅಧಿಕ ಸೋಂಕಿತರ ವರದಿಯಾಗುತ್ತಿದೆ. ನಗರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 12,793 ಗೆ ಏರಿದೆ. ದಕ್ಷಿಣ ಕನ್ನಡ (1,242) ಮತ್ತು ಧಾರವಾಡ (609) ಸಕ್ರಿಯ ಪ್ರಕರಣಗಳ ಲೆಕ್ಕಾಚಾರದಲ್ಲಿ ನಂತರದ ಸ್ಥಾನದಲ್ಲಿದೆ.

ಅದಲ್ಲದೆ ರಾಜ್ಯ ರಾಜಧಾನಿದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 16,000 ದಾಟಿದ್ದು, ಹಲವರ ಸೋಂಕಿನ ಮೂಲವೇ ಸಿಗದಿರುವುದು ಸರ್ಕಾರಕ್ಕೆ ತಲೆ ನೋವುಂಟುಮಾಡಿದೆ.

ಇಂದಿನ ವರದಿಯಲ್ಲಿ ರಾಜ್ಯ ರಾಜಧಾನಿಯನ್ನು ಹೊರತುಪಡಿಸಿ, ದಕ್ಷಿಣ ಕನ್ನಡದಲ್ಲಿ 186, ಉಡುಪಿ 90 ಮತ್ತು ಮೈಸೂರು 83 ಸೋಂಕಿತರ ಪತ್ತೆಯಾಗಿ ನಂತರದ ಸ್ಥಾನದಲ್ಲಿದೆ.

ರಾಜ್ಯದಲ್ಲಿ ಕೊರೋನಾ ರಣಕೇಕೆಯ ಮಧ್ಯದಲ್ಲಿ, ಇಂದು ಒಟ್ಟು 880 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. ರಾಜ್ಯದಲ್ಲಿ ಇದುವರೆಗೆ, ಒಟ್ಟು 14,716 ಸೋಂಕಿತರು ಗುಣಮುಖರಾಗಿದ್ದಾರೆ.

LEAVE A REPLY

Please enter your comment!
Please enter your name here