ರಾಜ್ಯದಲ್ಲಿ ಕೊರೋನಾ ರಣಕೇಕೆ – ಬೆಂಗಳೂರಿನಲ್ಲಿ ಒಂದೇ ದಿನ 783 ಸೋಂಕಿತರು!

0
58

ಬೆಂಗಳೂರಿನಲ್ಲಿ ಮಹಾಮಾರಿ ಕೊರೋನಾ ತನ್ನ ರುದ್ರ ನರ್ತನವನ್ನು ಮುಂದುವರೆಸಿದ್ದು, ಇಂದು ಒಂದೇ ದಿನ 783 ಜನರಲ್ಲಿ ಸೋಂಕು ದೃಢಪಟ್ಟಿದೆ. ಬೆಂಗಳೂರು ಸೇರಿದಂತೆ, ರಾಜ್ಯದಲ್ಲಿ ಒಟ್ಟು ದಾಖಲೆಯ 1,267 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಒಂದೇ ದಿನ ಸಾವಿರಕ್ಕೂ ಅಧಿಕ ಸೋಂಕಿತರು ಬೆಳಕಿಗೆ ಬಂದಿರುವುದು ಇದುವರೆಗಿನ ದಾಖಲೆಯಾಗಿದೆ. ಇದರಿಂದಾಗಿ ಒಟ್ಟು ಸಕ್ರಿಯ ಕೊರೋನಾ ಪ್ರಕರಣಗಳ ಸಂಖ್ಯೆ 5472 ಏರಿದಂತಾಗಿದೆ.

ಬೆಂಗಳೂರು ನಗರದಲ್ಲಿ ಸೋಂಕು ಈಗಾಗಲೇ ಸಮುದಾಯಕ್ಕೆ ಹಬ್ಬಿರುವುದು ಸ್ಪಷ್ಟವಾಗಿದೆ. ರಾಷ್ಟ್ರಕ್ಕೆ ಮಾದರಿ ನಗರವಾಗಿದ್ದ ಬೆಂಗಳೂರಿನಲ್ಲಿ, ಇದೀಗ ಒಟ್ಟು 2,692 ಸಕ್ರಿಯ ಪ್ರಕರಣಗಳಿದ್ದು, ಇತರ ಯಾವುದೇ ಜಿಲ್ಲೆಯಲ್ಲೂ ಈಗ 400ಕ್ಕೂ ಅಧಿಕ ಸಕ್ರಿಯ ಪ್ರಕರಣಗಳು ಇಲ್ಲ. ಬಳ್ಳಾರಿ (373) ಮತ್ತು ಕಲಬುರ್ಗಿ (371) ಸಕ್ರಿಯ ಪ್ರಕರಣಗಳ ಲೆಕ್ಕಾಚಾರದಲ್ಲಿ ನಂತರದ ಸ್ಥಾನದಲ್ಲಿದೆ.

ಇಂದಿನ ವರದಿಯಲ್ಲಿ ರಾಜ್ಯ ರಾಜಧಾನಿಯನ್ನು ಹೊರತುಪಡಿಸಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಾಖಲೆಯ 97 ಸೋಂಕಿತರು ಮತ್ತು ಬಳ್ಳಾರಿಯಲ್ಲಿ 71 ಸೋಂಕಿತರ ಪತ್ತೆಯಾಗಿದೆ. ಈ ಮೂರು ಜಿಲ್ಲೆಗಳ ಹೊರತು, ಇತರ ಯಾವುದೇ ಜಿಲ್ಲೆಯಲ್ಲೂ, 50ಕ್ಕೂ ಅಧಿಕ ಸೋಂಕಿತರು ಪತ್ತೆ ಆಗಲಿಲ್ಲ. ಉಡುಪಿ(40) ಮತ್ತು ಕಲಬುರ್ಗಿ (34) ನಂತರದ ಸ್ಥಾನದಲ್ಲಿದೆ.

ಅದಲ್ಲದೆ, ಇಂದು ರಾಜ್ಯದಲ್ಲಿ ಒಟ್ಟು 220 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. ರಾಜ್ಯದಲ್ಲಿ ಇದುವರೆಗೆ, ಒಟ್ಟು 7287 ಸೋಂಕಿತರು ಗುಣಮುಖರಾಗಿದ್ದಾರೆ. ಉಡುಪಿ ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ಸಾವಿರಕ್ಕೂ ಅಧಿಕ ಸೋಂಕಿತರು ಗುಣಮುಖರಾಗಿರುತ್ತಾರೆ.

ರಾಜ್ಯಾದ್ಯಂತ ಕೊರೋನಾ ತನ್ನ ಮರಣ ಮೃದಂಗವನ್ನೂ ಮುಂದುವರೆಸಿದ್ದು, ಸತತ ಮೂರನೇ ದಿನ 10ಕ್ಕೂ ಅಧಿಕ ಮಂದಿಯನ್ನು ಬಲಿ ತೆಗೆದುಕೊಂಡಿದೆ. ಇಂದು ಒಂದೇ ದಿನ 16 ಸೋಂಕಿತರು ಇಂದು ಕೊರೋನಾಗೆ ಬಲಿಯಾಗಿದ್ದಾರೆ. ಬೆಂಗಳೂರು ನಗರದಲ್ಲಿ 4, ದಕ್ಷಿಣ ಕನ್ನಡ, ಬಾಗಲಕೋಟೆ ಮತ್ತು ತುಮಕೂರು ಜಿಲ್ಲೆಗಳಲ್ಲಿ ತಲಾ 2, ಕಲಬುರ್ಗಿ, ಬಳ್ಳಾರಿ, ಮೈಸೂರು, ಧಾರವಾಡ ಮತ್ತು ಹಾಸನ ಜಿಲ್ಲೆಗಳಲ್ಲಿ ತಲಾ 1 ಸೋಂಕಿತರು ಸಾವನ್ನಪ್ಪಿದ್ದಾರೆ.

LEAVE A REPLY

Please enter your comment!
Please enter your name here