ರಾಜ್ಯದಲ್ಲಿ ದಾಖಲೆಯ 603 ಸೋಂಕಿತರು ಗುಣಮುಖ

0
109
Tap to know MORE!

ರಾಜ್ಯದಲ್ಲಿ ಕೊರೋನಾ ರಣಕೇಕೆಯ ಮಧ್ಯದಲ್ಲಿ, ಇಂದು ಒಟ್ಟು ದಾಖಲೆಯ 603 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. ಬೆಂಗಳೂರು ನಗರವೊಂದರಲ್ಲೇ 302 ಸೋಂಕಿತರು ಗುಣಮುಖರಾಗಿರುತ್ತಾರೆ. ರಾಜ್ಯದಲ್ಲಿ ಇದುವರೆಗೆ, ಒಟ್ಟು 9,847 ಸೋಂಕಿತರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರಿದಿದ್ದು, ರಾಜ್ಯ ರಾಜಧಾನಿಯಲ್ಲಿ ಮೊದಲ ಬಾರಿಗೆ ಒಂದೇ ದಿನ ಸಾವಿರಕ್ಕೂ ಅಧಿಕ ಸೋಂಕಿತರ ವರದಿಯಾಗಿದೆ. ಬೆಂಗಳೂರಿನ 1,235 ಸೇರಿದಂತೆ, ರಾಜ್ಯದಲ್ಲಿ ಇಂದು ಒಟ್ಟು 1925 ಸೋಂಕಿತರ ವರದಿಯಾಗಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 23,474ಗೆ ಏರಿದೆ. ಇವುಗಳ ಪೈಕಿ, 13,251 ಸಕ್ರಿಯ ಪ್ರಕರಣಗಳಿವೆ.

ರಾಷ್ಟ್ರಕ್ಕೆ ಮಾದರಿ ನಗರವಾಗಿದ್ದ ಬೆಂಗಳೂರಿನಲ್ಲಿ ಸತತ ಎರಡನೇ ದಿನ ಸಾವಿರಕ್ಕೂ ಅಧಿಕ ಸೋಂಕಿತರ ವರದಿಯಾಗಿದ್ದು, ಹಲವಾರು ವಲಸೆ ಕಾರ್ಮಿಕರು ಬೆಂಗಳೂರು ಬಿಟ್ಟು ಮರಳಿ ತಮ್ಮ ಗ್ರಾಮಕ್ಕೆ ಮರಳುತ್ತಿದ್ದಾರೆ. ನಗರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 8,167 ಗೆ ಏರಿದೆ. ದಕ್ಷಿಣ ಕನ್ನಡ (663), ಬಳ್ಳಾರಿ (657) ಮತ್ತು ಕಲಬುರ್ಗಿ (378) ಸಕ್ರಿಯ ಪ್ರಕರಣಗಳ ಲೆಕ್ಕಾಚಾರದಲ್ಲಿ ನಂತರದ ಸ್ಥಾನದಲ್ಲಿದೆ.

ಅದಲ್ಲದೆ ರಾಜ್ಯದಲ್ಲಿ ಒಟ್ಟು 5 ಜಿಲ್ಲೆಗಳಲ್ಲಿ ಸಾವಿರಕ್ಕೂ ಸೋಂಕಿತರ ವರದಿಯಾಗಿರುತ್ತದೆ. ಬೆಂಗಳೂರು ನಗರವು 10,000 ದಡೆಗೆ ಮುನ್ನುಗ್ಗುತ್ತಿದೆ

ಇಂದಿನ ವರದಿಯಲ್ಲಿ ರಾಜ್ಯ ರಾಜಧಾನಿಯನ್ನು ಹೊರತುಪಡಿಸಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 146, ಬಳ್ಳಾರಿ ಜಿಲ್ಲೆಯಲ್ಲಿ 90 ಮತ್ತು ಧಾರವಾಡದಲ್ಲಿ 51 ಸೋಂಕಿತರ ಪತ್ತೆಯಾಗಿ ನಂತರದ ಸ್ಥಾನದಲ್ಲಿದೆ.

ರಾಜ್ಯಾದ್ಯಂತ ಕೊರೋನಾ ತನ್ನ ಮರಣ ಮೃದಂಗವನ್ನೂ ಮುಂದುವರೆಸಿದ್ದು, ಇಂದು ದಾಖಲೆಯ 37 ಮಂದಿಯನ್ನು ಬಲಿ ತೆಗೆದುಕೊಂಡಿದೆ. , ಬೆಂಗಳೂರು ನಗರದಲ್ಲಿ ದಾಖಲೆಯ 16 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯ ರಾಜಧಾನಿಯನ್ನು ಹೊರತುಪಡಿಸಿ ಬೀದರ್ ನಲ್ಲಿ 9, ಕಲಬುರ್ಗಿ, ಬೆಳಗಾವಿ ಮತ್ತು ದಾವಣಗೆರೆಯಲ್ಲಿ ತಲಾ 2, ಹಾಸನ, ಬಳ್ಳಾರಿ, ಧಾರವಾಡ, ಮೈಸೂರು, ಚಿಕ್ಕಬಳ್ಳಾಪುರ ಮತ್ತು ತುಮಕೂರಿನ ತಲಾ 1 ಸೋಂಕಿತರು ಸಾವನ್ನಪ್ಪಿದ್ದಾರೆ.

LEAVE A REPLY

Please enter your comment!
Please enter your name here