ರಾಜ್ಯದಲ್ಲಿ ಮದುವೆಗೆ 50ಕ್ಕಿಂತ ಹೆಚ್ಚು ಜನರು ಸೇರಿದ್ರೆ ಬೀಳುತ್ತೆ ದಂಡ!

0
77

ಕೊರೋನಾ ಸೋಂಕಿನ ಭೀತಿಯ ನಡುವೆಯೂ ಮದುವೆಗೆ ಅವಕಾಶ ನೀಡಲಾಗಿತ್ತು. 50 ಜನರಿಗೆ ಮಾತ್ರವೇ ಸೀಮಿತಗೊಳಿಸಲಾಗಿತ್ತು. ಆದ್ರೇ ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಕಾರಣ, 50 ಜನರಿಗಿಂತ ಹೆಚ್ಚು ಜನರು ಮದುವೆಗೆ ಸೇರುವಂತಿಲ್ಲ. ಒಂದು ವೇಳೆ ಅದಕ್ಕಿಂತಲೂ ಹೆಚ್ಚಿನ ಜನರು ಸೇರಿದ್ದೇ ಆದಲ್ಲಿ, ಮದುವೆ ನಡೆಸುತ್ತಿರುವವರಿಗೆ ದಂಡ ವಿಧಿಸಲಾಗುತ್ತದೆ ಎಂಬುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಮಾಸ್ಕ್ ಧರಿಸೋದರ ಬಗ್ಗೆ ಮತ್ತಷ್ಟು ಕಠಿಣ ನಿಯಮ ಜಾರಿಗೊಳಿಸಲಾಗುತ್ತಿದೆ. ಮಾಸ್ಕ್ ಧರಿಸದೇ ನಗರ ಪ್ರದೇಶಗಳಲ್ಲಿ ಓಡಾಡುವ ಜನರಿಗೆ ರೂ.1000 ದಂಡ ವಿಧಿಸಲಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ ರೂ.500 ದಂಡವನ್ನು ವಿಧಿಸಲಾಗುತ್ತದೆ ಎಂಬುದಾಗಿ ತಿಳಿಸಿದರು.

LEAVE A REPLY

Please enter your comment!
Please enter your name here