ರಾಜ್ಯದಲ್ಲಿ ಸತತ ಎರಡನೇ ದಿನ 2 ಸಾವಿರಕ್ಕೂ ಅಧಿಕ ಸೋಂಕಿತರ ವರದಿ!

0
63

ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರಿದಿದ್ದು, ಬೆಂಗಳೂರಿನ 1,373 ಸೇರಿದಂತೆ, ರಾಜ್ಯದಲ್ಲಿ ಸತತ ಎರಡನೇ ದಿನ 2 ಸಾವಿರಕ್ಕೂ ಅಧಿಕ ಸೋಂಕಿತರ ವರದಿಯಾಗಿದೆ. ಇಂದಿನ 2,248 ಸೇರಿದಂತೆ, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 31,105 ಗೆ ಏರಿಕೆಯಾಗಿದ್ದು, 17,782 ಸಕ್ರಿಯ ಪ್ರಕರಣಗಳಿವೆ.

ರಾಷ್ಟ್ರಕ್ಕೆ ಮಾದರಿ ನಗರವಾಗಿದ್ದ ಬೆಂಗಳೂರಿನಲ್ಲಿ ಸಾವಿರಕ್ಕೂ ಅಧಿಕ ಸೋಂಕಿತರ ವರದಿಯಾಗಿದೆ. ರಾಜಧಾನಿಯಲ್ಲಿ ಹೆಚ್ಚುತ್ತಿರುವ ಸೋಂಕಿನ ಭೀತಿಯಿಂದ, ಹಲವಾರು ವಲಸೆ ಕಾರ್ಮಿಕರು ಬೆಂಗಳೂರು ಬಿಟ್ಟು ಮರಳಿ ತಮ್ಮ ಗ್ರಾಮಕ್ಕೆ ಮರಳುತ್ತಿದ್ದಾರೆ. ನಗರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 10,870 ಗೆ ಏರಿದೆ. ದಕ್ಷಿಣ ಕನ್ನಡ (990) ಮತ್ತು ಬಳ್ಳಾರಿ (783) ಸಕ್ರಿಯ ಪ್ರಕರಣಗಳ ಲೆಕ್ಕಾಚಾರದಲ್ಲಿ ನಂತರದ ಸ್ಥಾನದಲ್ಲಿದೆ.

ಅದಲ್ಲದೆ ರಾಜ್ಯ ರಾಜಧಾನಿದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 13,000 ದಾಟಿದ್ದು, ಹಲವರ ಸೋಂಕಿನ ಮೂಲವೇ ಸಿಗದಿರುವುದು ಸರ್ಕಾರಕ್ಕೆ ತಲೆ ನೋವುಂಟುಮಾಡಿದೆ.

ಇಂದಿನ ವರದಿಯಲ್ಲಿ ರಾಜ್ಯ ರಾಜಧಾನಿಯನ್ನು ಹೊರತುಪಡಿಸಿ, ದಕ್ಷಿಣ ಕನ್ನಡದಲ್ಲಿ 167, ಕಲಬುರ್ಗಿಯಲ್ಲಿ 85 ಮತ್ತು ಧಾರವಾಡದಲ್ಲಿ 75 ಸೋಂಕಿತರ ಪತ್ತೆಯಾಗಿ ನಂತರದ ಸ್ಥಾನದಲ್ಲಿದೆ.

ರಾಜ್ಯದಲ್ಲಿ ಕೊರೋನಾ ರಣಕೇಕೆಯ ಮಧ್ಯದಲ್ಲಿ, ಇಂದು ಒಟ್ಟು ದಾಖಲೆಯ 957 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. ಬೆಂಗಳೂರು ನಗರವೊಂದರಲ್ಲೇ 606 ಸೋಂಕಿತರು ಗುಣಮುಖರಾಗಿರುತ್ತಾರೆ. ರಾಜ್ಯದಲ್ಲಿ ಇದುವರೆಗೆ, ಒಟ್ಟು 12,833 ಸೋಂಕಿತರು ಗುಣಮುಖರಾಗಿದ್ದಾರೆ.

ರಾಜ್ಯಾದ್ಯಂತ ಕೊರೋನಾ ತನ್ನ ಮರಣ ಮೃದಂಗವನ್ನೂ ಮುಂದುವರೆಸಿದ್ದು, ಇಂದು 17 ಮಂದಿಯನ್ನು ಬಲಿ ತೆಗೆದುಕೊಂಡಿದೆ. ರಾಜ್ಯದಲ್ಲಿ ಇದುವರೆಗೆ 486 ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು ಧಾರವಾಡದಲ್ಲಿ 7, ಹಾಸನ, ಮೈಸೂರು ಮತ್ತು ಕಲಬುರ್ಗಿ ತಲಾ 2, ರಾಯಚೂರು, ಉತ್ತರ ಕನ್ನಡ, ತುಮಕೂರು ಮತ್ತು ದಾವಣಗೆರೆ ತಲಾ 1 ಸೋಂಕಿತರು ಸೋಂಕಿನಿಂದ ಬಲಿಯಾಗಿದ್ದಾರೆ.

LEAVE A REPLY

Please enter your comment!
Please enter your name here