ರಾಜ್ಯದಲ್ಲಿ 16 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ!

0
81

ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರಿದಿದ್ದು, ಇಂದು ಒಂದೇ ದಿನ 1,272 ಜನರಲ್ಲಿ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 16,514ಕ್ಕೆ ಏರಿದೆ. ಇವುಗಳ ಪೈಕಿ, 8196 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಸುಮಾರು ಎರಡು ತಿಂಗಳ ಬಳಿಕ ಗುಣಮಖರಾದವರ ಸಂಖ್ಯೆಗಿಂತ ಸಕ್ರಿಯ ಪ್ರಕರಣಗಳ ಸಂಖ್ಯೆಯು ಹೆಚ್ಚಿದೆ.

ರಾಷ್ಟ್ರಕ್ಕೆ ಮಾದರಿ ನಗರವಾಗಿದ್ದ ಬೆಂಗಳೂರಿನಲ್ಲಿ ಇಂದು 735 ಸೋಂಕಿತರ ವರದಿಯಾಗಿದ್ದು, ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,649 ಗೆ ಏರಿದೆ. ಬಳ್ಳಾರಿ (485), ದಕ್ಷಿಣ ಕನ್ನಡ (408) ಮತ್ತು ಕಲಬುರ್ಗಿ (329) ಸಕ್ರಿಯ ಪ್ರಕರಣಗಳ ಲೆಕ್ಕಾಚಾರದಲ್ಲಿ ನಂತರದ ಸ್ಥಾನದಲ್ಲಿದೆ. ರಾಜ್ಯದ ಇತರ ಯಾವುದೇ ಜಿಲ್ಲೆಗಳಲ್ಲೂ ಈಗ 200ಕ್ಕೂ ಅಧಿಕ ಸಕ್ರಿಯ ಪ್ರಕರಣಗಳು ಇಲ್ಲ.

ಇಂದಿನ ವರದಿಯಲ್ಲಿ ರಾಜ್ಯ ರಾಜಧಾನಿಯನ್ನು ಹೊರತುಪಡಿಸಿ, ಬಳ್ಳಾರಿಯಲ್ಲಿ 85 ಸೋಂಕಿತರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 84 ಸೋಂಕಿತರ ಪತ್ತೆಯಾಗಿ ನಂತರದ ಸ್ಥಾನದಲ್ಲಿದೆ.

ಅದಲ್ಲದೆ, ಇಂದು ರಾಜ್ಯದಲ್ಲಿ ಒಟ್ಟು 145 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. ರಾಜ್ಯದಲ್ಲಿ ಇದುವರೆಗೆ, ಒಟ್ಟು 7,918 ಸೋಂಕಿತರು ಗುಣಮುಖರಾಗಿದ್ದಾರೆ.

ರಾಜ್ಯಾದ್ಯಂತ ಕೊರೋನಾ ತನ್ನ ಮರಣ ಮೃದಂಗವನ್ನೂ ಮುಂದುವರೆಸಿದ್ದು, ಇಂದು 7 ಮಂದಿಯನ್ನು ಬಲಿ ತೆಗೆದುಕೊಂಡಿದೆ. ಬೆಂಗಳೂರು ನಗರ ಮತ್ತು ಬೀದರ್ ಜಿಲ್ಲೆಯಲ್ಲಿ 2, ದಕ್ಷಿಣ ಕನ್ನಡ, ಬೆಳಗಾವಿ ಮತ್ತು ಹಾಸನದಲ್ಲಿ ತಲಾ 1 ಸೋಂಕಿತರು ಸಾವನ್ನಪ್ಪಿದ್ದಾರೆ.

LEAVE A REPLY

Please enter your comment!
Please enter your name here