ರಾಜ್ಯದಲ್ಲಿ 25 ಸಾವಿರ ದಾಟಿದ ಸೋಂಕಿತರ ಸಂಖ್ಯೆ !

0
124
Tap to know MORE!

ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರಿದಿದ್ದು, ಬೆಂಗಳೂರಿನ 981 ಸೇರಿದಂತೆ, ರಾಜ್ಯದಲ್ಲಿ ಇಂದು ಒಟ್ಟು 1843 ಸೋಂಕಿತರ ವರದಿಯಾಗಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 25,317 ಗೆ ಏರಿಕೆಯಾಗಿದ್ದು, 14,385 ಸಕ್ರಿಯ ಪ್ರಕರಣಗಳಿವೆ.

ರಾಷ್ಟ್ರಕ್ಕೆ ಮಾದರಿ ನಗರವಾಗಿದ್ದ ಬೆಂಗಳೂರಿನಲ್ಲಿ 981 ಸೋಂಕಿತರ ವರದಿಯಾಗಿದೆ. ರಾಜಧಾನಿಯಲ್ಲಿ ಹೆಚ್ಚುತ್ತಿರುವ ಸೋಂಕಿನ ಭೀತಿಯಿಂದ, ಹಲವಾರು ವಲಸೆ ಕಾರ್ಮಿಕರು ಬೆಂಗಳೂರು ಬಿಟ್ಟು ಮರಳಿ ತಮ್ಮ ಗ್ರಾಮಕ್ಕೆ ಮರಳುತ್ತಿದ್ದಾರೆ. ನಗರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 8,860 ಗೆ ಏರಿದೆ. ಬಳ್ಳಾರಿ (737) ಮತ್ತು ದಕ್ಷಿಣ ಕನ್ನಡ (620) ಸಕ್ರಿಯ ಪ್ರಕರಣಗಳ ಲೆಕ್ಕಾಚಾರದಲ್ಲಿ ನಂತರದ ಸ್ಥಾನದಲ್ಲಿದೆ. ಇತರ ಯಾವುದೇ ಜಿಲ್ಲೆಗಳಲ್ಲೂ 400ಕ್ಕೂ ಅಧಿಕ ಪ್ರಕರಣಗಳು ಸಕ್ರಿಯವಾಗಿಲ್ಲ.

ಅದಲ್ಲದೆ ರಾಜ್ಯ ರಾಜಧಾನಿದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 10,000 ದಾಟಿದೆ ಮತ್ತು ಇತರ 4 ಜಿಲ್ಲೆಗಳಲ್ಲಿ ಸಾವಿರಕ್ಕೂ ಅಧಿಕ ಸೋಂಕಿತರ ವರದಿಯಾಗಿರುತ್ತದೆ.

ರಾಜ್ಯದಲ್ಲಿ ಕೊರೋನಾ ರಣಕೇಕೆಯ ಮಧ್ಯದಲ್ಲಿ, ಇಂದು ಒಟ್ಟು ದಾಖಲೆಯ 680 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. ಬೆಂಗಳೂರು ನಗರವೊಂದರಲ್ಲೇ 278 ಸೋಂಕಿತರು ಗುಣಮುಖರಾಗಿರುತ್ತಾರೆ. ರಾಜ್ಯದಲ್ಲಿ ಇದುವರೆಗೆ, ಒಟ್ಟು 10,527 ಸೋಂಕಿತರು ಗುಣಮುಖರಾಗಿದ್ದಾರೆ.

ಇಂದಿನ ವರದಿಯಲ್ಲಿ ರಾಜ್ಯ ರಾಜಧಾನಿಯನ್ನು ಹೊರತುಪಡಿಸಿ, ಬಳ್ಳಾರಿಯಲ್ಲಿ 99 ಮತ್ತು ಉತ್ತರ ಕನ್ನಡದಲ್ಲಿ 81 ಸೋಂಕಿತರ ಪತ್ತೆಯಾಗಿ ನಂತರದ ಸ್ಥಾನದಲ್ಲಿದೆ.

ರಾಜ್ಯಾದ್ಯಂತ ಕೊರೋನಾ ತನ್ನ ಮರಣ ಮೃದಂಗವನ್ನೂ ಮುಂದುವರೆಸಿದ್ದು, ಇಂದು ದಾಖಲೆಯ 30 ಮಂದಿಯನ್ನು ಬಲಿ ತೆಗೆದುಕೊಂಡಿದೆ. ಇದುವರೆಗೆ 401 ಸೋಂಕಿತರು ಸಾವನ್ನಪ್ಪಿದ್ದಾರೆ.ಇಂದು ಬೆಂಗಳೂರು ನಗರದಲ್ಲಿ 10, ಬೀದರ್ ನಲ್ಲಿ 8, ಮೈಸೂರಿನಲ್ಲಿ 3, ದಕ್ಷಿಣ ಕನ್ನಡ 2, ಕೊಡಗು, ಹಾಸನ, ದಾವಣಗೆರೆ, ಬಳ್ಳಾರಿ, ಬಾಗಲಕೋಟೆ, ಚಿಕ್ಕಬಳ್ಳಾಪುರ ಮತ್ತು ತುಮಕೂರಿನ ತಲಾ 1 ಸೋಂಕಿತರು ಸಾವನ್ನಪ್ಪಿದ್ದಾರೆ.

LEAVE A REPLY

Please enter your comment!
Please enter your name here