ರಾಜ್ಯದ ಜನತೆಗೆ ಉಚಿತ ಲಸಿಕೆ ನೀಡಲು ಚರ್ಚೆ

0
175
Tap to know MORE!

ದೇಶದಲ್ಲಿಯೇ ತಯಾರಿಸಿದ ಲಸಿಕೆಗಳನ್ನು ಬೇರೆ ದೇಶಗಳಿಗಿಂತ ಕಡಿಮೆ ದರದಲ್ಲಿ ಜನಸಾಮಾನ್ಯರಿಗೆ ದೊರಕುವಂತೆ ಮಾಡಲಾಗಿದೆ. ಉಚಿತವಾಗಿ ಜನರಿಗೆ ಲಸಿಕೆ ನೀಡುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು ಎಂದು ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.

ದೇಶಾದ್ಯಂತ ಕೊರೋನಾ ವಾರಿಯರ್ಸ್ ಗೆ ಲಸಿಕೆ ನೀಡಿಕೆ ಅಭಿಯಾನ ಆರಂಭವಾಗಿದೆ. ನಿನ್ನೆ ಶಿವಮೊಗ್ಗದಲ್ಲಿ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು ಉಚಿತ ಲಸಿಕೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುವುದು.

ಬೇರೆ ದೇಶಗಳ ಲಸಿಕೆಯನ್ನು ಮೈನಸ್ ಡಿಗ್ರಿಯಲ್ಲಿ ಸಂಗ್ರಹಿಸಿಡುವ ಅನಿವಾರ್ಯತೆ ಇದೆ. ಆದರೆ, ಭಾರತದ ಲಸಿಕೆಯನ್ನು ಸುಲಭವಾಗಿ ದಾಸ್ತಾನು ಮಾಡಬಹುದು. ಎಲ್ಲರಿಗೂ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮ ವಿಜ್ಞಾನಿಗಳು ಯಶಸ್ವಿಯಾಗಿ ಲಸಿಕೆ ಸಿದ್ಧಪಡಿಸಿರುವುದು ಹೆಮ್ಮೆಯ ಸಂಗತಿಯಾಗಿದ್ದು, ಜನಸಾಮಾನ್ಯರಿಗೆ ಉಚಿತವಾಗಿ ಲಸಿಕೆ ನೀಡುವ ನಿಟ್ಟಿನಲ್ಲಿ ಈ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದ್ದಾರೆ

LEAVE A REPLY

Please enter your comment!
Please enter your name here