ಕರ್ನಾಟಕದ 19ನೇ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಿದ ತಾವರ್ ಚಂದ್ ಗೆಹ್ಲೋಟ್

0
162
Tap to know MORE!

ಬೆಂಗಳೂರು: ಕರ್ನಾಟಕದ 19ನೇ ರಾಜ್ಯಪಾಲರಾಗಿ 73 ವರ್ಷದ ತಾವರ್ ಚಂದ್ ಗೆಹ್ಲೋಟ್ ಅವರು ಭಾನುವಾರ ಬೆಳಗ್ಗೆ ಪ್ರಮಾಣವಚನ ಸ್ವೀಕರಿಸಿದರು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಓಕ್​ ಪ್ರತಿಜ್ಞಾವಿಧಿ ಬೋಧಿಸಿದರು.

ರಾಜಭವನದ ಗಾಜಿನಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಈಶ್ವರನ ಹೆಸರಿನಲ್ಲಿ ತಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಸ್ವೀಕರಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಿರ್ಗಮಿತ ರಾಜ್ಯಪಾಲ ವಜುಬಾಯಿ ವಾಲಾ. ವಿಧಾನಸಭಾಧ್ಯಕ್ಷ ವಿಶ್ವೇಶ್ವರಹೆಗಡೆ ಕಾಗೇರಿ, ಮೇಲ್ಮನೆ ಸಭಾಪತಿ ಬಸವರಾಜ ಹೊರಟ್ಟಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಉಪಸ್ಥಿತರಿದ್ದರು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಮಧ್ಯಪ್ರದೇಶದ ನಾಗ್ಡಾದ ರುಪೆಟಾ ಗ್ರಾಮದಲ್ಲಿ ದಲಿತ ಕುಟುಂಬದಲ್ಲಿ ಜನಿಸಿದ ತಾವರ್ ಚಂದ್ ಗೆಹ್ಲೋಟ್, ಭಾರತೀಯ ಜನತಾ ಪಕ್ಷದ ಹಿರಿಯ ಸದಸ್ಯರು. ಮಧ್ಯಪ್ರದೇಶದ ಉಜ್ಜಯಿನ ವಿಕ್ರಮ್ ವಿಶ್ವವಿದ್ಯಾಲಯದಿಂದ ಬ್ಯಾಚುಲರ್ ಆಫ್ ಆರ್ಟ್ಸ್ ಪದವಿ ಪಡೆದಿದ್ದಾರೆ. ಇವರು ಕೇಂದ್ರ ಸಾಮಾಜಿಕ, ನ್ಯಾಯ ಸಬಲೀಕರಣ ಸಚಿವರಾಗಿದ್ದರು. ಮೂರು ಬಾರಿ ಮಧ್ಯಪ್ರದೇಶದ ಶಾಸಕರಾಗಿ, ನಾಲ್ಕುಬಾರಿ ಲೋಕಸಭಾ ಸದಸ್ಯರಾಗಿದ್ದ ಥಾವರ್ ಚಂದ್ ಗೆಹ್ಲೋಟ್ ಅವರು ಹಾಲಿ ರಾಜ್ಯಸಭಾ ಸದಸ್ಯರಾಗಿದ್ದರು. ಇವರಿಗೆ ಡಾ.ಬಿ.ಆರ್‌.ಅಂಬೇಡ್ಕರ್‌ ಯೂನಿರ್ವಸಿಟಿ ಆಫ್ ಸೋಷಿಯಲ್‌ ಸೈನ್ಸ್‌ನಿಂದ ಗೌರವ ಡಾಕ್ಟರೇಟ್‌ ನೀಡಲಾಗಿದೆ.

LEAVE A REPLY

Please enter your comment!
Please enter your name here