ನವದೆಹಲಿ: ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿಯವರನ್ನು ಉತ್ತರ ಪ್ರದೇಶ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ರಾಜ್ಯದ ಹತ್ರಾಸ್ಗೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಹೊರಟಿದ್ದರು. ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಪೊಲೀಸರು ಇವರ ವಾಹನವನ್ನ ತಡೆ ಹಿಡಿದಿದ್ದಾರೆ. ಅದಕ್ಕೆ ಗರಂ ಆದ ಇವರಿಬ್ಬರು, ಪಾದಯಾತ್ರೆ ಮೂಲಕ ಹತ್ರಾಸ್ಗೆ ಹೊರಟಿದ್ದರು.
ಈ ಸಂದರ್ಭದಲ್ಲಿ ಮತ್ತೆ ಎದುರಾದ ಪೊಲೀಸರು ರಾಹುಲ್ ಗಾಂಧಿಯನ್ನ ತಡೆದು ನಿಲ್ಲಿಸಿದ್ದಾರೆ. ಆಗ ಪೊಲೀಸರು ಮತ್ತು ರಾಹುಲ್ ಗಾಂಧಿ ಮಧ್ಯೆ ವಾಗ್ವಾದ ನಡೆದಿದೆ.
ನೂರಾರು ಕಾರ್ಯಕರ್ತರೂ ಇದ್ದುದರಿಂದ ನೂಕುನುಗ್ಗಲು ಸಂಭವಿಸಿ ತಳ್ಳಾಟ ಕೂಡ ನಡೆದಿದೆ. ಪರಿಸ್ಥಿತಿಯನ್ನ ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಪೊಲೀಸರು ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿಯನ್ನ ವಶಕ್ಕೆ ಪಡೆದುಕೊಂಡಿದ್ದಾರೆ.
ಹತ್ರಾಸ್ನಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿ ಮಾಡಲು ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ವಾದ್ರಾ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.