ಸೆ.17 ರವರೆಗೆ ಭಾರೀ ಮಳೆಯ ಮುನ್ಸೂಚನೆ – ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

0
172
Tap to know MORE!

ಬೆಂಗಳೂರು ಸೆ.13: ಕರ್ನಾಟಕ ರಾಜ್ಯದಲ್ಲಿ ಸೆಪ್ಟೆಂಬರ್ 14 ರಿಂದ ಸೆ.17 ರವರೆಗೆ ಭಾರೀ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕರಾದ ಸಿ.ಎಸ್ ಪಾಟೀಲ್, ರಾಜ್ಯದ ಕರಾವಳಿ ಭಾಗದಲ್ಲಿ ಇಂದಿನಿಂದ ಸೆಪ್ಟೆಂಬರ್ 17 ರವರೆಗೆ ಅತೀ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲೂ ಕರಾವಳಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವುದಾಗಿ ತಿಳಿಸಿದ್ದಾರೆ.

ರೆಡ್ ಅಲರ್ಟ್
● ದಕ್ಷಿಣ ಕನ್ನಡ
● ಉಡುಪಿ
● ಉತ್ತರ ಕನ್ನಡ

ಯೆಲ್ಲೋ ಅಲರ್ಟ್
● ಕಲಬುರಗಿ
● ಯಾದಗಿರಿ
● ಬೀದರ್

ಆರೇಂಜ್ ಅಲರ್ಟ್
● ಹಾಸನ
● ಚಿಕ್ಕಮಗಳೂರು
● ಕೊಡಗು
● ಶಿವಮೊಗ್ಗ

ಬೆಂಗಳೂರಿನಲ್ಲಿಯೂ ಭಾರೀ ಮಳೆಯಾಗುವುದಾಗಿ ತಿಳಿಸಿದ್ದಾರೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 17ರ ತನಕ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.

LEAVE A REPLY

Please enter your comment!
Please enter your name here