ಲಕ್ಷಣರಹಿತ ಸೋಂಕಿತರಿಗಾಗಿ ಪ್ರತ್ಯೇಕ ಕೇಂದ್ರಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧಾರ

0
213
Tap to know MORE!

ಲಕ್ಷಣರಹಿತ ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ಕರ್ನಾಟಕ ಸರ್ಕಾರವು ಪ್ರತ್ಯೇಕ ಕೋವಿಡ್ ಕೇರ್ ಕೇಂದ್ರಗಳನ್ನು ಸ್ಥಾಪಿಸಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ತಿಳಿಸಿದ್ದಾರೆ.

“ಕಳೆದ ಎರಡು ವಾರಗಳಿಂದ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ, ರೋಗಲಕ್ಷಣವಿಲ್ಲದ ಸೋಂಕಿತ ವ್ಯಕ್ತಿಗಳ ಮೇಲೆ ನಿಗಾ ವಹಿಸಲು ಮತ್ತು ಚಿಕಿತ್ಸೆ ನೀಡಲು ಕೋವಿಡ್ ಕೇರ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು” ಎಂದು ಸಚಿವರು ಹೇಳಿದರು.

ವಿವಿಧ ಹಂತಗಳಲ್ಲಿ ಕೋವಿಡ್ ಪ್ರಕರಣಗಳಿಗೆ ಅಗತ್ಯವಾದ ಚಿಕಿತ್ಸೆ ಮತ್ತು ಆರೈಕೆಯ ಬಗ್ಗೆ ಸಲಹೆ ನೀಡಲು ಈಗಾಗಲೇ ತಜ್ಞರ ಸಮಿತಿಯನ್ನು ರಚಿಸಲಾಗಿದೆ ಎಂದು ಅವರು ಹೇಳಿದರು.

“ಬೆಂಗಳೂರು ನಗರದ ಕೋವಿಡ್ ಕೇರ್ ಕೇಂದ್ರಗಳಲ್ಲಿ 20,000 ಹಾಸಿಗೆಗಳು ಲಭ್ಯವಾಗುವಂತೆ ಬಿಬಿಎಂಪಿ ಆಯುಕ್ತರಿಗೆ ನಿರ್ದೇಶಿಸಲಾಗಿದೆ . ಇದು ಆಸ್ಪತ್ರೆಗಳ ಮೇಲಿನ ಹೊರೆಯನ್ನು ಕಡಿಮೆ ಮಾಡುತ್ತದೆ ಮತ್ತು ಅಗತ್ಯವಿರುವವರಿಗೆ ಶೀಘ್ರದಲ್ಲೇ ಹಾಸಿಗೆಗಳು ಲಭ್ಯವಾಗುವಂತೆ ನೋಡಿಕೊಳ್ಳುತ್ತದೆ” ಎಂದು ಸುಧಾಕರ್ ಹೇಳಿದರು.

ವೈರಸ್ ವಿರುದ್ಧದ ಹೋರಾಟದಲ್ಲಿ ಪೂರ್ವಭಾವಿಯಾಗಿ ಪಾಲ್ಗೊಳ್ಳುವಂತೆ ಅವರು ಖಾಸಗಿ ಆಸ್ಪತ್ರೆಗಳಿಗೆ ಕರೆ ನೀಡಿದರು ಮತ್ತು ಸಾಮರ್ಥ್ಯವನ್ನು ಹೊಂದಿದ್ದರೂ ಸಹ ಅವರು ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ನಿರಾಕರಿಸಿದರೆ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಕೆ ನೀಡಿದರು.

“ಕೋವಿಡ್ ಪ್ರಕರಣಗಳ ಚಿಕಿತ್ಸೆಗಾಗಿ ಕಾಯ್ದಿರಿಸಬೇಕಾದ ಹಾಸಿಗೆಗಳು, ಐಸಿಯು ಮತ್ತು ವೆಂಟಿಲೇಟರ್‌ಗಳ ಸೌಲಭ್ಯಗಳ ಬಗ್ಗೆ ವಿವರವಾದ ಮಾರ್ಗಸೂಚಿಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು” ಎಂದು ಅವರು ಹೇಳಿದರು.

LEAVE A REPLY

Please enter your comment!
Please enter your name here