ಬೆಂಗಳೂರು : ಲೆಜಿಟ್ ಫೌಂಡೇಶನ್ ಮತ್ತು ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಿಂದಾಗಿ, ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಒಂದು ನೋಟಿಸ್ ನೀಡಿದೆ.
ಕೋವಿಡ್ -19 ಮಾನದಂಡಗಳನ್ನು ಬಹಿರಂಗವಾಗಿ ಉಲ್ಲಂಘಿಸಿದ ಹಲವು ಗಣ್ಯರು ಮತ್ತು ರಾಜಕಾರಣಿಗಳ ವಿರುದ್ಧ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹಿತಾಸಕ್ತಿ ಅರ್ಜಿಯಲ್ಲಿ ಹೇಳಲಾಗಿದೆ.
ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರದ ಕಡೆಯಿಂದ ಇಂತಹ ನಿರ್ಲಕ್ಷ್ಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.
ಸೋಮವಾರ ಸಲ್ಲಿಸಿದ್ದ ಅರ್ಜಿಯ ಪರಿಶೀಲನೆಯ ನಂತರ, ಹೈಕೋರ್ಟ್ ಸಹ ಬಿ ಎಸ್ ವೈ ಸರ್ಕಾರಕ್ಕೆ ನೋಟಿಸ್ ಕಳುಹಿಸಿದೆ. ಹೀಗಾಗಿ, ಅಂತಹ ವ್ಯಕ್ತಿಗಳ ವಿರುದ್ಧ ಕ್ರಮಗಳನ್ನು ತೆಗೆದುಕೊಂಡಿದ್ದರೆ, ಅದರ ಬಗ್ಗೆ ವಿವರವಾದ ವರದಿಯನ್ನು ಸಲ್ಲಿಸುವಂತೆ ಹೈಕೋರ್ಟ್ ಸರ್ಕಾರವನ್ನು ಕೇಳಿದೆ.