ಲಾಕ್ಡೌನ್ ಇನ್ನಷ್ಟು ಸಡಿಲಿಕೆಯಾದ್ರೂ ರಸ್ತೆಗಿಳಿಯಲ್ಲ ಖಾಸಗಿ ಬಸ್‌ಗಳು!

0
154
Tap to know MORE!

ಮಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ಸಡಿಲಿಕೆಯಾದರೂ ಖಾಸಗಿ ಬಸ್ ಗಳನ್ನು ರಸ್ತೆಗಿಳಿಸದಿರಲು ರಾಜ್ಯ ಖಾಸಗಿ ಬಸ್ ಮಾಲೀಕರ ಒಕ್ಕೂಟ ನಿರ್ಧರಿಸಿದೆ. ಒಕ್ಕೂಟದ ಅಧ್ಯಕ್ಷ ರಾಜವರ್ಮಾ ಬಳ್ಳಾಲ್ ಈ ಬಗ್ಗೆ ಮಾಹಿತಿ ನೀಡಿದ್ದು, ಖಾಸಗಿ ಬಸ್ ಮಾಲೀಕರ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸಿಲ್ಲ. ಹೀಗಾಗಿ ಲಾಕ್ ಡೌನ್ ಸಡಿಲಿಕೆ ನಂತರವೂ ಬಸ್ ಗಳನ್ನು ರಸ್ತೆಗಿಳಿಸದೇ ಇರಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

ಜೂನ್‌ 21 ರಿಂದ ರಾಜ್ಯಾದ್ಯಂತ ಅನ್ಲಾಕ್ ಜಾರಿಗೊಳಿಸಲು ತಾಂತ್ರಿಕ ಸಲಹಾ ಸಮಿತಿ ಸೂಚನೆ| ಯಾವುದಕ್ಕೆಲ್ಲ ಅನುಮತಿ?

ಕಳೆದ ಒಂದು ವರ್ಷದಿಂದ ಖಾಸಗಿ ಬಸ್ ಮಾಲೀಕರು ಸಂಕಷ್ಟದಲ್ಲಿದ್ದು, ಡೀಸೆಲ್ ದರ ಏರಿಕೆಯಾಗಿದ್ದರೂ ಪ್ರಯಾಣ ದರ ಹೆಚ್ಚಳ ಮಾಡಲು ಸರ್ಕಾರ ಒಪ್ಪಿಗೆ ನೀಡುತ್ತಿಲ್ಲ. ಇದರಿಂದಾಗಿ ಮತ್ತಷ್ಟು ನಷ್ಟ ಅನುಭವಿಸಲು ನಾವು ಸಿದ್ಧವಿಲ್ಲ ಎಂದು ಹೇಳಿದ್ದಾರೆ. ಸುಮಾರು 50 ಸಾವಿರಕ್ಕೂ ಅಧಿಕ ಕಾರ್ಮಿಕರು ತೊಂದರೆಯಲ್ಲಿದ್ದು, ಸರ್ಕಾರ ಕೂಡಲೇ ಮಾತುಕತೆಗೆ ಕರೆದು ಸಮಸ್ಯೆಯನ್ನು ಬಗೆಹರಿಸಿ ನೆರವು ನೀಡಬೇಕೆಂದು ಆಗ್ರಹಿಸಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here