ದೇಶದಲ್ಲಿ ಮತ್ತೊಮ್ಮೆ ಜಾರಿಯಾಗಲಿದೆಯಾ ಲಾಕ್‌ಡೌನ್?

0
91
Tap to know MORE!

ನವದೆಹಲಿ: ಇತ್ತೀಚೆಗೆ ಪ್ರತಿನಿತ್ಯ ಸುಮಾರು 45 ಸಾವಿರ ಹೊಸ ಪ್ರಕರಣಗಳು (ಕೋವಿಡ್ -19) ವರದಿಯಾಗುತ್ತಿದೆ. ಇದರಿಂದ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 88 ಲಕ್ಷ ದಾಟಿದೆ. ಅದೇ ಸಮಯದಲ್ಲಿ 82 ಲಕ್ಷಕ್ಕೂ ಅಧಿಕ ಜನರು ಗುಣಮುಖರಾಗಿದ್ದಾರೆ. ಇದರೊಂದಿಗೆ ರೋಗಿಗಳ ಚೇತರಿಕೆಯ ಪ್ರಮಾಣವು ಶೇಕಡಾ 92.97ಕ್ಕೆ ಏರಿದೆ. ಏತನ್ಮಧ್ಯೆ ಭಾರತದಲ್ಲಿ ಮತ್ತೊಮ್ಮೆ ಲಾಕ್‌ಡೌನ್ ಜಾರಿಗೊಳಿಸಬಹುದು ಎಂಬ ವರದಿಗಳು ಹರಿದಾಡುತ್ತಿವೆ.

ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಹಲವು ರೀತಿಯ ವದಂತಿಗಳು ಮತ್ತು ನಕಲಿ ಸುದ್ದಿಗಳು ಸಾಮಾಜಿಕ ಮಾಧ್ಯಮದಲ್ಲಿ ವೇಗವಾಗಿ ವೈರಲ್ ಆಗಿ ಬಿಡುತ್ತವೆ. ಈ ಹಿನ್ನಲೆಯಲ್ಲಿ ಕೊರೋನಾಗೆ ಸಂಬಂಧಿಸಿದಂತೆ ಯಾವುದೇ ವಿಷಯವನ್ನು ಅಧಿಕೃತವಾಗಿ ಘೋಷಿಸುವವರೆಗೂ ಇಂತಹ ವದಂತಿಗಳನ್ನು ನಂಬಬೇಡಿ ಎಂದು ಸರ್ಕಾರ ಆಗಾಗ್ಗೆ ಹೇಳುತ್ತಲೇ ಇರುತ್ತದೆ. ಇತ್ತೀಚೆಗೆ ದೇಶದಲ್ಲಿ ಕರೋನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಡಿಸೆಂಬರ್ 1 ರಿಂದ ಮತ್ತೆ ಲಾಕ್‌ಡೌನ್ ಆಗಲಿದೆ ಎಂಬ ವರದಿಯು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಏತನ್ಮಧ್ಯೆ ಲಾಕ್‌ಡೌನ್ ಮತ್ತೆ ಜಾರಿಯಾಗಲಿದೆಯೇ ಎಂಬ ಪ್ರಶ್ನೆ ಹಲವರ ಮನಸ್ಸಿನಲ್ಲಿದೆ.

ಪಿಐಬಿಯ ಫ್ಯಾಕ್ಟ್ ಚೆಕ್ ತಂಡ ಈ ಟ್ವೀಟ್ ಬಗ್ಗೆ ತನಿಖೆ ನಡೆಸಿದೆ :
ಈ ವೈರಲ್ ಟ್ವೀಟ್ ಅನ್ನು ತನಿಖೆ ಮಾಡಿದಾಗ ಈ ಮಾಹಿತಿಯು ಸುಳ್ಳು ಎಂದು ತಿಳಿದುಬಂದಿದೆ. ಈ ನಕಲಿ ಟ್ವೀಟ್ ಅನ್ನು ಪಿಐಬಿ ಫ್ಯಾಕ್ಟ್ ಚೆಕ್ ತಂಡವು ತನಿಖೆ ಮಾಡಿದೆ. ಪಿಐಬಿ ಫ್ಯಾಕ್ಟ್-ಚೆಕ್ ತಂಡದ ಪ್ರಕಾರ ಸರ್ಕಾರವು ಅಂತಹ ಯಾವುದೇ ಘೋಷಣೆ ಮಾಡಿಲ್ಲ. ಪಿಐಬಿಯ ಫ್ಯಾಕ್ಟ್ ಚೆಕ್ ತಂಡವು ಈ ಟ್ವೀಟ್ ಮಾರ್ಫೆಡ್ (Morphed) ಆಗಿದೆ ಮತ್ತು ಅಂತಹ ಯಾವುದೇ ನಿರ್ಧಾರವನ್ನು ಕೈಗೊಳ್ಳುವ ಬಗ್ಗೆ ಸರ್ಕಾರ ಚಿಂತಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದೆ.

ಅಂತರ್ಜಾಲದಲ್ಲಿ ನಕಲಿ ಸುದ್ದಿ ಮತ್ತು ವದಂತಿಗಳನ್ನು ತಡೆಗಟ್ಟಲು ಪತ್ರಿಕಾ ಮಾಹಿತಿ ಬ್ಯೂರೋ (ಪಿಐಬಿ) 2019 ರ ಡಿಸೆಂಬರ್‌ನಲ್ಲಿ ಈ ಸತ್ಯ ಪರಿಶೀಲನಾ ವಿಭಾಗವನ್ನು ಪ್ರಾರಂಭಿಸಿತು. ಸರ್ಕಾರದ ನೀತಿಗಳು ಮತ್ತು ಯೋಜನೆಗಳಿಗೆ ಸಂಬಂಧಿಸಿದ ಅಂತರ್ಜಾಲದಲ್ಲಿ ಹರಡಿರುವ ತಪ್ಪು ಮಾಹಿತಿಯನ್ನು ನಿಗ್ರಹಿಸುವುದು ಇದರ ಉದ್ದೇಶ.

LEAVE A REPLY

Please enter your comment!
Please enter your name here