ವಿದ್ಯಾಗಮ ಕಾರ್ಯಕ್ರಮಕ್ಕೆ ತಾತ್ಕಾಲಿಕ ಬ್ರೇಕ್!

0
97

ಕೋವಿಡ್ ಸಂಕಷ್ಟ ಕಾಲದಲ್ಲೂ, ವಿದ್ಯಾರ್ಥಿಗಳಿಗೆ ಶಿಕ್ಷಣ ಒದಗಿಸಬೇಕು, ತರಗತಿಗಳು ತಪ್ಪಬಾರದೆಂಬ ದೊಡ್ಡ ಉದ್ದೇಶ ಇಟ್ಟುಕೊಂಡು, ರಾಜ್ಯದಲ್ಲಿ ಜಾರಿಗೆ ತಂದಿರುವ ವಿದ್ಯಾಗಮ ಕಾರ್ಯಕ್ರಮಕ್ಕೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ವಿದ್ಯಾಗಮದ ಕುರಿತು ಕೆಲವು ವಲಯಗಳಲ್ಲಿ ನಕರಾತ್ಮಕ ಅಭಿಪ್ರಾಯಗಳು ವ್ಯಕ್ತವಾಗಿರುವುದಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು. ಹಲವೆಡೆ ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ವಿದ್ಯಾಗಮಕ್ಕೆ ಬ್ರೇಕ್ ನೀಡಲಾಗಿದೆ.

ರಾಜ್ಯದಲ್ಲಿ ಜಾರಿ ತಂದಿರುವ #ವಿದ್ಯಾಗಮ ಕಾರ್ಯಕ್ರಮದ ಕುರಿತು ಕೆಲವು ವಲಯಗಳಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿರುವುದನ್ನು …

Posted by Suresh Kumar S on Saturday, 10 October 2020

“ವಿದ್ಯಾಗಮ ಸಮಾಜದ ಕೆಳಸ್ಥರದ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಕ್ಕಳ ಹಿತವನ್ನು ಮನದಲ್ಲಿ ಇಟ್ಟುಕೊಂಡು ಯೋಜಿಸಿರುವ ಕಾರ್ಯಕ್ರಮ. ಆದರೂ ವಿವಿಧ ವಲಯಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ಶಿಕ್ಷಣ ಇಲಾಖೆ ಈ ಕುರಿತು ಸಂಗ್ರಹಿಸಲು ಉದ್ದೇಶಿಸಿರುವ ಜಿಲ್ಲಾವಾರು ಅಂಕಿ ಅಂಶಗಳ ಸ್ವೀಕಾರ‌ ಹಾಗೂ ಅದರ ಸಮರ್ಪಕ‌ ವಿಶ್ಲೇಷಣೆ‌ ಪೂರ್ಣಗೊಳ್ಳುವವರೆಗೂ ವಿದ್ಯಾಗಮ‌ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ” ಎಂದು ಸಚಿವರು ತಿಳಿಸಿದರು

LEAVE A REPLY

Please enter your comment!
Please enter your name here