ವಿದ್ಯಾರ್ಥಿಗಳು ಹಳೇ ‘ಬಸ್ ಪಾಸ್’ ಬಳಸಿ ಪರೀಕ್ಷೆಗೆ ಹಾಜರಾಗಲು ಅನುಮತಿ

0
106

ಕೊರೋನಾ ಭೀತಿಯ ನಡುವೆಯೂ ಪದವಿ ಹಾಗೂ ಸ್ನಾತಕೋತ್ತರ ಪದವಿ, ವೃತ್ತಿಪರ ಪರೀಕ್ಷೆಗಳೂ ನಡೆಸೋದಕ್ಕೆ ನಿರ್ಧರಿಸಲಾಗಿದೆ. ಆದ್ರೆ ಕೆ ಎಸ್ ಆರ್ ಟಿ ಸಿ ವಿದ್ಯಾರ್ಥಿಗಳ ಬಸ್ ಪಾಸ್ ಅವದಿ ಮುಕ್ತಾಯಗೊಂಡಿತ್ತು. ವಿದ್ಯಾರ್ಥಿಗಳ ಬಸ್ ಪಾಸ್ ಅವದಿ ಮುಕ್ತಾಯಗೊಂಡಿರುವ ಕಾರಣ, ಪರೀಕ್ಷೆಗೆ ಹಾಜರಾಗಲು ತೊಂದರೆಯಾಗಿತ್ತು.

ಹೀಗಾಗಿ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಮನವಿ ಮಾಡಿದ್ದರ ಹಿನ್ನಲೆಯಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಹಳೆಯ ವಿದ್ಯಾರ್ಥಿ ಬಸ್ ಪಾಸ್ ಬಳಸಿಕೊಂಡು ಒಡಾಟಕ್ಕೆ ಅನುಮತಿ ನೀಡಿದೆ.

ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಜರಾಗಲು ಹಳೆಯ ವಿದ್ಯಾರ್ಥಿ ಬಸ್ ಪಾಸ್ ನಲ್ಲಿಯೇ ತೆರಳಲು ಅನುಮತಿ ನೀಡಲಾಗಿದೆ ಎಂಬುದಾಗಿ ತಿಳಿಸಿದೆ.

LEAVE A REPLY

Please enter your comment!
Please enter your name here