ವಿದ್ಯಾರ್ಥಿ ಲಸಿಕಾ ಅಭಿಯಾನ: ಮಂಗಳೂರು ವಿವಿ ಕಾಲೇಜಿನ 400 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೋವಿಡ್‌ ಲಸಿಕೆ

0
208
Tap to know MORE!

ಮಂಗಳೂರು: ಕೋವಿಡ್‌-19 ಸಾಂಕ್ರಾಮಿಕದ ವಿರುದ್ಧ ಭಾರತ ಸರ್ಕಾರ ಹಮ್ಮಿಕೊಂಡಿರುವ ರಾಷ್ಟ್ರೀಯ ಲಸಿಕಾ ಅಭಿಯಾನದಡಿ ಎನ್‌ಎಸ್‌ಎಸ್‌ ಸಹಯೋಗದಲ್ಲಿ, ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಮೊದಲ ಹಂತದ ಲಸಿಕಾಕರಣದಲ್ಲಿ ಸುಮಾರು 425 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಯಿತು.

ವಿದ್ಯಾರ್ಥಿಗಳು, ಬೆಳಗ್ಗಿನಿಂದಲೇ ಕಾಲೇಜಿಗೆ ಬಂದು ಕೂಪನ್‌ ಪಡೆದುಕೊಂಡು, ಕೊವಿನ್‌ ಅಪ್ಲಿಕೇಶನ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಂಡು ಉತ್ಸಾಹದಿಂದ ಲಸಿಕೆ ಪಡೆದುಕೊಂಡರು. ಈ ಮುನ್ನ ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯಾಧಿಕಾರಿ ಡಾ. ಬಿ ವಿ ರಾಜೇಶ್‌, ವಿದ್ಯಾರ್ಥಿಗಳಿಗೆ ಕೊವಿಡ್‌ ವಿರುದ್ಧದ ಲಸಿಕೆಯ ಉದ್ದೇಶ, ಲಾಭಗಳು ಮತ್ತು ವಹಿಸಬೇಕಾದ ಮುನ್ನಚ್ಚರಿಕೆಯ ಕುರಿತು ವಿವರಿಸಿದರು. ಯಾವುದೇ ಊಹಾಪೋಹಗಳಿಗೆ ಕಿವಿಗೊಡದೆ ಕೊವಿಡ್‌ ಲಸಿಕೆ ಪಡೆದುಕೊಳ್ಳಿ ಎಂದು ಅವರು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

ಜುಲೈ 19 ಮತ್ತು 22 ರಂದು SSLC ಪರೀಕ್ಷೆ ; ಮಲ್ಟಿಪಲ್ ಚಾಯ್ಸ್ ಮಾದರಿಯಲ್ಲಿ ಓಎಂಆರ್ ಶೀಟ್‌ನಲ್ಲಿ ಪರೀಕ್ಷೆ

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪ್ರಾಂಶುಪಾಲೆ ಡಾ. ಅನಸೂಯ ರೈ, ಮಂಗಳೂರು ವಿಶ್ವವಿದ್ಯಾನಿಲಯ ಎನ್‌.ಎಸ್‌.ಎಸ್‌ ಕಾರ್ಯಕ್ರಮಾಧಿಕಾರಿ ಡಾ. ಕೆ ಎ ನಾಗರತ್ನ, ಕಾಲೇಜಿನ ಎನ್‌.ಎಸ್‌.ಎಸ್‌ ಅಧಿಕಾರಿಗಳಾದ ಡಾ. ಗಾಯತ್ರಿ ಮತ್ತು ಡಾ. ಸುರೇಶ್‌, ಮಂಗಳೂರು ವಿಶ್ವವಿದ್ಯಾನಿಲಯದ ರೆಡ್‌ಕ್ರಾಸ್‌ ನೋಡಲ್‌ ಅಧಿಕಾರಿ ಡಾ. ಗಣಪತಿ ಗೌಡ, ಕಾಲೇಜಿನ ಕೊವಿಡ್‌ ನೋಡಲ್‌ ಅಧಿಕಾರಿ ಡಾ. ಭಾರತಿ ಪ್ರಕಾಶ್‌ ಮೊದಲಾದವರು ಈ ವೇಳೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here