ಸಿಗುವ ಉದ್ಯೋಗವನ್ನು ಶ್ರದ್ಧೆಯಿಂದ ಮಾಡಿದರೆ ಎತ್ತರಕ್ಕೆ ಏರಲು ಸಾಧ್ಯ: ವಿವೇಕ್ ನಂಬಿಯಾರ್

0
193
Tap to know MORE!

ಹಳೆಯಂಗಡಿ ಜ.4: ಉದ್ಯೋಗಾಕಾಂಕ್ಷಿಗಳಲ್ಲಿ ಭವಿಷ್ಯವನ್ನು ರೂಪಿಸುವ ಛಲ ಇರಬೇಕು ಹಾಗೂ ಸಿಗುವ ಉದ್ಯೋಗವನ್ನು ಶ್ರದ್ಧೆಯಿಂದ ಮಾಡಿದಲ್ಲಿ ಅದರಲ್ಲಿ ಗಳಿಸಿದ ಅನುಭವದಿಂದ ಇನ್ನಷ್ಟು ಎತ್ತರಕ್ಕೆ ಬೆಳೆಯುವ ಅವಕಾಶಗಳು ಬಹಳಷ್ಟು ಇದೆ ಎಂದು ಹಿಮತ್ಸಿಂಗ್ ಲಿನೆನ್ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ಏಚ್.ಆರ್ ಹೆಡ್ ವಿವೇಕ್ ನಂಬಿಯಾರ್ ಹೇಳಿದರು.

ಭಾನುವಾರ ಯುವಕ ಮಂಡಲದ ಸಭಾಂಗಣದಲ್ಲಿ ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲದ ಸುವರ್ಣ ಮಹೋತ್ಸವದ ಅಂಗವಾಗಿ ಹಿಮತ್ಸಿಂಗ್ ಕ ಲಿನೆನ್, ಹಾಸನ ಇವರ ಸಹಯೋಗದಲ್ಲಿ ಸಂಸ್ಥೆಯ ಉತ್ಪಾದನಾ ಘಟಕದಲ್ಲಿ ಉದ್ಯೋಗಾವಕಾಶ ಮತ್ತು ನೇಮಕಾತಿ ಕಾರ್ಯಗಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭ, ತಮ್ಮ ಕಂಪೆನಿಯ ವಿಚಾರವನ್ನು ಸವಿಸ್ತಾರವಾಗಿ ಪ್ರಸ್ತಾಪಿಸಿದರು.

ಇದನ್ನೂ ಓದಿ: ಹಳೆಯಂಗಡಿ : ಸ್ಕಿಪ್ಪಿಂಗ್ ಮತ್ತು ಸೈಕಲ್ ಜಾಥಾ ಕಾರ್ಯಕ್ರಮ

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಪ್ರದೀಪ್ ಶೆಟ್ಟಿ ಕುಳಾಯಿ ಇವರು ನೆರವೇರಿಸಿದರು. ಈ ಸಂದರ್ಭದಲ್ಲಿ ಯುವಕ ಮಂಡಲವು ಇಂತಹ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜನೆ ಮಾಡಿರುವ ಬಗ್ಗೆ ಬಹಳ ಮೆಚ್ಚುಗೆ ಪಡಿಸಿ, ರಾಜ್ಯ ಪ್ರಶಸ್ತಿ ಪಡೆದ ಮಂಡಲಕ್ಕೆ ಅಭಿನಂದಿಸಿ ಮಂಡಲದ ಸುವರ್ಣ ಮಹೋತ್ಸವಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಹಿಮಾತ್ಸಿಂಗ್ ಸಂಸ್ಥೆಯ ಶ್ರೀ ನಿತಿನ್ ಮತ್ತು ಸಂತೋಷ್ ಉಪಸ್ಥಿತರಿದ್ದರು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ವೇದಿಕೆಯಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ಶ್ರೀ ಯತೀಶ್ ಕೋಟ್ಯಾನ್, ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀ ಸುಧಾಕರ ಆರ್ ಅಮೀನ್, ಟ್ರಸ್ಟಿನ ಪ್ರಧಾನ ಕಾರ್ಯದರ್ಶಿ ಶ್ರೀ ಸ್ಟ್ಯಾನಿ ಡೀ ಕೋಸ್ಟಾ, ಸಲಹಾ ಸಮಿತಿಯ ಅಧ್ಯಕ್ಷರಾದ ಶ್ರೀ ಸದಾಶಿವ ಅಂಚನ್, ಮಹಿಳಾ ಮಂಡಲದ ಅಧ್ಯಕ್ಷರಾದ ಶ್ರೀಮತಿ ರೇಷ್ಮಾ ಅಶ್ರಫ್, ಯುವತಿ ಮಂಡಲದ ಅಧ್ಯಕ್ಷರಾದ ಕುಮಾರಿ ದಿವ್ಯಶ್ರೀ ರಮೇಶ್ ಕೋಟ್ಯಾನ್ ಉಪಸ್ಥಿತರಿದ್ದರು.

ಸುವರ್ಣ ಮಹೋತ್ಸವ ಸಮಿತಿಯ ಮ ಕಾರ್ಯಾಧ್ಯಕ್ಷರಾದ ಶ್ರೀ ಸುಧಾಕರ ಆರ್ ಅಮೀನ್ ಅತಿಥಿಗಳನ್ನು ಸ್ವಾಗತಿಸಿ, ಮಂಡಲದ ಅಧ್ಯಕ್ಷರಾದ ಶ್ರೀ ಯತೀಶ್ ಕೋಟ್ಯಾನ್ ಧನ್ಯವಾದ ಅರ್ಪಿಸಿದರು. ಸುವರ್ಣ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಮದಾಸ್ ಪಾವಂಜೆ ಕಾರ್ಯಕ್ರಮ ನಿರೂಪಿಸಿದರು.

ಮುಲ್ಕಿ : 8 ವರ್ಷದ ಮಗು ಸಹಿತ ದಂಪತಿ ಆತ್ಮಹತ್ಯೆ..!

LEAVE A REPLY

Please enter your comment!
Please enter your name here