ಲಂಡನ್ : ಪ್ರಪಂಚದಾದ್ಯಂತ ಕೊರೊನಾ ವೈರಸ್ ಹಾವಳಿ ಮುಂದುವರೆದಿದ್ದು, ವಿಶ್ವದ ಅತೀ ವೇಗದ ಓಟಗಾರ ಉಸೈನ್ ಬೋಲ್ಟ್ ಗೆ ಕೂಡ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಕುರಿತು ಹೇಳಿರುವ ಉಸೈನ್ ಬೋಲ್ಟ್, ನನಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ. ಶನಿವಾರ ನಾನು ಪರೀಕ್ಷೆ ಮಾಡಿಸಿದ್ದೆ. ಹೀಗಾಗಿ ಮನೆಯಲ್ಲೇ ಐಸೋಲೇಷನ್ ಗೆ ಒಳಗಾಗಿದ್ದೇನೆ. ನನಗೆ ಯಾವುದೇ ರೋಗ ಲಕ್ಷಣಗಳಿಲ್ಲ. ಆದರೆ ಸುರಕ್ಷತೆ ದೃಷ್ಟಿಯಿಂದ ಕ್ವಾರಂಟೈನ್ ಗೆ ಒಳಗಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.