ಎಚ್ ವಿಶ್ವನಾಥ್ ಕನಸು ಭಗ್ನ – ಸಚಿವನಾಗಲು ಅನರ್ಹ ಎಂದ ಹೈಕೋರ್ಟ್!

0
130
Tap to know MORE!

ಹೆಚ್.ವಿಶ್ವನಾಥ್ 2021 ರವರೆಗೆ ಸಚಿವರಾಗಲು ಅನರ್ಹರಾಗಿದ್ದಾರೆ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ.

ಹೆಚ್ ವಿಶ್ವನಾಥ್, ಆರ್. ಶಂಕರ್ ಮತ್ತು ಎಂಟಿಬಿ ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ವಿಭಾಗೀಯ ಪೀಠವು, ಹೆಚ್.ವಿಶ್ವನಾಥ್ ಸಚಿವರಾಗಲು ಅನರ್ಹರಾಗಿದ್ದಾರೆ. ಅನರ್ಹರಾಗಿ, ಸೋತು ನಾಮ ನಿರ್ದೇಶನಗೊಂಡಿದ್ದಾರೆ. ವಿಶ್ವನಾಥ್ ಅನರ್ಹತೆಯನ್ನು ಸಿಎಂ ಪರಿಗಣಿಸಬೇಕು. ಕಲಂ 164(1ಬಿ), 361 ಬಿ ಅಡಿ ವಿಶ್ವನಾಥ್ ಅನರ್ಹರು. ಹೀಗಾಗಿ 2021ರವರೆಗೆ ಸಚಿವರಾಗಲು ಅರ್ಹರಲ್ಲ ಎಂಬುದಾಗಿ ಮಹತ್ವದ ಆದೇಶ ನೀಡಿದೆ.

ಇನ್ನೂ ಆರ್.ಶಂಕರ್, ಎಂ.ಟಿ.ಬಿ ನಾಗರಾಜ್ ಅವರು ಚುನಾವಣೆಯಲ್ಲಿ ಆಯ್ಕೆಗೊಂಡು ಎಂ.ಎಲ್ ಸಿ ಆಗಿದ್ದಾರೆ. ಹೀಗಾಗಿ ಅವರಿಗೆ ಸಚಿವರಾಗಲು ಯಾವುದೇ ಅಡೆತಡೆಯಿಲ್ಲ.

ಈ ಮೂಲಕ ಹಳ್ಳಿಹಕ್ಕಿ ಹೆಚ್ ವಿಶ್ವಾನಾಥ್ ಗೆ ಬಿಗ್ ಶಾಕ್ ನೀಡಿದೆ. ಅಲ್ಲದೇ ಆರ್ ಶಂಕರ್, ಎಂ.ಟಿ.ಬಿ.ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡೋದಕ್ಕೆ ಗ್ರೀನ್ ಸಿಗ್ನಲ್ ನೀಡುವ ಮೂಲಕ ಬಿಗ್ ರಿಲೀಫ್ ನೀಡಿದೆ.

LEAVE A REPLY

Please enter your comment!
Please enter your name here