ಪಂಚಾಯತ್ ಚುನಾವಣೆ : ಒಂದು ದಿನ ವೇತನ ಸಹಿತ ರಜೆ ಘೋಷಿಸಿದ ರಾಜ್ಯ ಸರ್ಕಾರ

0
56

ಬೆಂಗಳೂರು ಡಿ.18: ರಾಜ್ಯದ 5,728 ಗ್ರಾಮ ಪಂಚಾಯ್ತಿಗಳಿಗೆ 2 ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತ 22-12-2020ರಂದು ಹಾಗೂ 2ನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ 27-12-2020ರಂದು ನಡೆಯಲಿದೆ.

ಈ ಹಿನ್ನೆಲೆಯಲ್ಲಿ ದಿನಾಂಕ 22-12-2020ರ ಮಂಗಳವಾರದಂದು ಕರ್ನಾಟಕ ಪಂಚಾಯತ್ ರಾಜ್ (ಚುನಾವಣೆಯನ್ನು ನಡೆಸುವ) ನಿಯಮಗಳು, 1993ರ ನಿಯಮ 114ನ್ನು ಓದಿಕೊಂಡಂತೆ, ಪ್ರಜಾ ಪ್ರತಿನಿಧಿ ಕಾಯ್ದೆ 1954ರ ಸೆಕ್ಷನ್-135ಬಿ ಅಡಿಯಲ್ಲಿ ವೇತನ ಸಹಿತ ರಜೆ ಘೋಷಿಸಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಸರ್ಕಾರದ ಅಧೀನ ಕಾರ್ಯದರ್ಶಿ-1 ಆಧಿಸೂಚನೆ ಹೊರಡಿಸಿದ್ದಾರೆ.

ಇದನ್ನೂ ಓದಿ: ಗುಜರಾತ್: ಸಾವಿಗೂ ಮುನ್ನ, ಏಳು ಮಕ್ಕಳ ಪ್ರಾಣ ಉಳಿಸಿದ ಎರಡುವರೆ ವರ್ಷದ ಮಗು!!

ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡತಕ್ಕದ್ದು. ಈ ಚುನಾವಣೆ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರು ಚುನಾವಣಾ ಕಾರ್ಯಕ್ಕೆ ಹಾಜರಾಗತಕ್ಕದ್ದು ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಯಾರಿಗೆಲ್ಲಾ ರಜೆ?
ಚುನಾವಣೆ ನಡೆಯುವ ಗ್ರಾಮ ಪಂಚಾಯತ್ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕ್‌ಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕೆ ಸಂಸ್ಥೆಗಳು, ಸಹಕಾರ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರೆ ಖಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಅರ್ಹ ಮತದಾರ ನೌಕರರಿಗೆ ದಿನಾಂಕ 22-12-2020ರ ಮಂಗಳವಾರದಂದು ರಜೆ ಇರಲಿದೆ.

“ಬೆಂಗಳೂರು ಮಿಷನ್ 2022” – ತಮ್ಮ ಕನಸಿನ ಪರಿಕಲ್ಪನೆಯನ್ನು ತೆರೆದಿಟ್ಟ ಸಿಎಂ ಬಿಎಸ್‌ವೈ

LEAVE A REPLY

Please enter your comment!
Please enter your name here