ಜ.1 ರಿಂದಲೇ ಶಾಲಾರಂಭ ! ತರಗತಿ ವೇಳಾಪಟ್ಟಿ ಪ್ರಕಟಿಸಿದ ಶಿಕ್ಷಣ ಇಲಾಖೆ!

0
268
Tap to know MORE!

ಬೆಂಗಳೂರು: ಜನವರಿ 1 ರಿಂದ ಶಾಲೆ ಆರಂಭದ ನಿರ್ಧಾರದಲ್ಲಿ ಬದಲಾವಣೆ ಇಲ್ಲ. ಮುಂದಿನ ದಿನಗಳಲ್ಲಿ ಅಗತ್ಯವಿದ್ದರೆ ಸಭೆ ನಡೆಸಿ ಪರಿಶೀಲನೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಶಾಲೆ ಆರಂಭಕ್ಕೆ ಮೂರು ದಿನ ಮೊದಲು ಸಿಬ್ಬಂದಿ, ಶಿಕ್ಷಕರಿಗೆ ಕೋವಿಡ್ ಪರೀಕ್ಷೆ ನೆಗೆಟಿವ್ ಕಡ್ಡಾಯವಾಗಿರುತ್ತದೆ. 10 ನೇ ತರಗತಿಗೆ ಹೊಸ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ವಾರದಲ್ಲಿ 6 ದಿನ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 30 ರವರೆಗೆ ತಲಾ 45 ನಿಮಿಷಗಳ ಮೂರು ಅವಧಿಗಳಲ್ಲಿ ಬೋಧನೆ ಮಾಡಲಾಗುತ್ತದೆ. ವಿದ್ಯಾರ್ಥಿ ಸಂಖ್ಯೆಗೆ ಅನುಗುಣವಾಗಿ ತಂಡಗಳನ್ನು ರಚಿಸಿ ಪಾಠ ಮಾಡಲಾಗುವುದು.

ಇದನ್ನೂ ಓದಿ: 2021ರ ಮಾರ್ಚ್ ತಿಂಗಳಲ್ಲಿ ನಡೆಯುವುದಿಲ್ಲ SSLC, PUC ಪರೀಕ್ಷೆಗಳು!

ಪ್ರಥಮ ಭಾಷೆ, ದ್ವಿತೀಯ ಭಾಷೆ, ತೃತೀಯ ಭಾಷೆ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ದೈಹಿಕ ಶಿಕ್ಷಣ ಹಾಗೂ ಇತರೆ(ಚಿತ್ರಕಲೆ/ವೃತ್ತಿ) ಸೇರಿ 8 ತಂಡ ಮಾಡಿ ತರಗತಿ ನಡೆಸಲು ತಿಳಿಸಿದೆ. ಬೆಳಗ್ಗೆ 10ಗಂಟೆಯಿಂದ 10.45ರ ತನಕ ಒಂದು ಅವಧಿ, 10.45ರಿಂದ 11.30 2ನೇ ಅವಧಿ ಹಾಗೂ 11.45ರಿಂದ 12.30ರವರೆಗೆ 3ನೇ ಅವಧಿ ಇರಲಿವೆ. 2 ಅವಧಿ ನಂತರ 15 ನಿಮಿಷ ವಿರಾಮ ಇರಲಿದೆ. ಮಧ್ಯಾಹ್ನದ 12.30 ನಂತರ ತರಗತಿಗಳು ಇರುವುದಿಲ್ಲ.

ಕೋವಿಡ್ ಸುರಕ್ಷತೆ ಸಂಬಂಧಿಸಿದಂತೆ ಎಲ್ಲ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ. ಶಿಕ್ಷಕರು ಕೋವಿಡ್ ಪರೀಕ್ಷೆ ಮಾಡಿಸಿ, ನೆಗೆಟಿವ್ ವರದಿ ಸಲ್ಲಿಸುವುದು ಕಡ್ಡಾಯವಾಗಿದೆ. 50 ವರ್ಷ ಮೇಲ್ಪಟ್ಟ ಶಿಕ್ಷಕರು ಮಾಸ್ಕ್ ಜತೆಗೆ ಕಡ್ಡಾಯವಾಗಿ ಫೇಸ್​ಸೀಲ್ಡ್ ಬಳಸಬೇಕು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ವಿದ್ಯಾಗಮ ವೇಳಾಪಟ್ಟಿ : ವಿದ್ಯಾಗಮ ತರಗತಿಗೆ ಸಂಬಂಧ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಾಲಾ ಕೊಠಡಿ, ಪ್ರಯೋಗಾಲಯ, ವಾಚನಾಲಯ, ವರಾಂಡ ಬಳಸಿಕೊಳ್ಳಲು ಸೂಚಿಸಿದೆ. ಸಾಮಾಜಿಕ ಅಂತರ ಸಹಿತವಾಗಿ ಎಲ್ಲ ಸುರಕ್ಷತಾ ಕ್ರಮ ಪಾಲಿಸಬೇಕು. ಒಂದು ಕೊಠಡಿಯಲ್ಲಿ 15-20 ವಿದ್ಯಾರ್ಥಿಗಳಿಗಷ್ಟೇ ವ್ಯವಸ್ಥೆ ಮಾಡಬೇಕು ಎಂದು ಹೇಳಿದೆ.

ವಿದ್ಯಾಗಮ ತರಗತಿಯೂ ಕೂಡ 8 ತಂಡಗಳಲ್ಲಿ ನಡೆಯಲಿದ್ದು, ಪ್ರತಿ ಸೋಮವಾರ, ಬುಧವಾರ ಹಾಗೂ ಶುಕ್ರವಾರ 6 ಹಾಗೂ 9ನೇ ತರಗತಿ, ಪ್ರತಿ ಮಂಗಳವಾರ, ಗುರುವಾರ, ಶನಿವಾರ 7 ಹಾಗೂ 8ನೇ ತರಗತಿಗಳ ವಿದ್ಯಾಗಮ ಪಾಠ ನಡೆಯಲಿದೆ. ಕೆಲವೊಂದು ಶಾಲೆಗಳಲ್ಲಿ 8ನೇ ತರಗತಿಯವರೆಗೆ ಮಾತ್ರ ಇದ್ದು, ಅಲ್ಲಿ ಬುಧವಾರವೂ 8ನೇ ತರಗತಿ ನಡೆಯಲಿದೆ.

ಕೊರೋನಾ : ರೂಪಾಂತರಗೊಂಡ ಸೋಂಕಿನ ತಡೆಗೆ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದ ಕೇಂದ್ರ ಸರ್ಕಾರ!

LEAVE A REPLY

Please enter your comment!
Please enter your name here