ಡಿ.1 ರಿಂದ ಎಲ್ಲಾ ವೈದ್ಯಕೀಯ ಕಾಲೇಜುಗಳು ಪುನರಾರಂಭ : ಸಚಿವ ಡಾ| ಸುಧಾಕರ್

0
64

ಬೆಂಗಳೂರು : ಕೋವಿಡ್ ಸೋಂಕು ಇಳಿಮುಖವಾದ ಬೆನ್ನಲ್ಲೇ ರಾಜ್ಯದಲ್ಲಿ ಕಾಲೇಜುಗಳು ಪ್ರಾರಂಭಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲಾ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ & ಫಾರ್ಮಸಿ ಕಾಲೇಜುಗಳನ್ನು ಡಿಸೆಂಬರ್ 1ರಿಂದ ಪುನರಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಇದನ್ನೂ ಓದಿ: ಪದವಿ ಶಿಕ್ಷಣಕ್ಕೆ ಆನ್ಲೈನ್ ವೇದಿಕೆ ಸೃಷ್ಟಿಸಲು ಮುಂದಾಗಿದೆ ರಾಜ್ಯ ಸರ್ಕಾರ!

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಟ್ವೀಟ್ ಮಾಡಿ, ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲಾ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ & ಫಾರ್ಮಸಿ ಕಾಲೇಜುಗಳನ್ನು ಡಿಸೆಂಬರ್ 1ರಿಂದ ಪುನರಾರಂಭಿಸಲು ನಿರ್ಧರಿಸಲಾಗಿದೆ. ಈಗಾಗಲೇ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಕಾಲೇಜುಗಳ ಆಡಳಿತ ಮಂಡಳಿಗಳನ್ನು ಹಾಗೂ ವಿದ್ಯಾರ್ಥಿಗಳನ್ನು ವಿನಂತಿಸುತ್ತೇನೆಂದು ಹೇಳಿದ್ದಾರೆ.

ನವೆಂಬರ್ 17 ರಿಂದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಆಫ್‌ಲೈನ್ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ನಿರ್ಧರಿಸಿದೆ ಎಂದು ಈ ಹಿಂದೆ ಉಪ ಮುಖ್ಯಮಂತ್ರಿ ಸಿಎನ್ ಅಶ್ವತ್ ನಾರಾಯಣ್ ತಿಳಿಸಿದ್ದರು. ಈ ನಿರ್ಧಾರದ ಬೆನ್ನಲ್ಲೇ ಇದೀಗ ದಂತ, ವೈದ್ಯಕೀಯ ಕಾಲೇಜು ಆರಂಭಕ್ಕೆ ಸರ್ಕಾರ ನಿರ್ಧರಿಸಿದೆ.

LEAVE A REPLY

Please enter your comment!
Please enter your name here