ಶಬರಿಮಲೆ : ಇಂದು ತೆರೆಯಲಿದೆ ಗರ್ಭಗುಡಿ | ಸಂಜೆ ಮಂಡಲ ಪೂಜೆ

0
161
Tap to know MORE!

ತಿರುವನಂತಪುರ: ಈ ವರ್ಷದ ಮಂಡಲ ಪೂಜಾ ಉತ್ಸವಕ್ಕಾಗಿ ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆ ದೇವಸ್ಥಾನದ ಗರ್ಭಗುಡಿಯ ಬಾಗಿಲು ಭಾನುವಾರ ತೆರೆಯಲಾಗುತ್ತದೆ.

ಇಂದು ಸಾಯಂಕಾಲ 5 ಗಂಟೆಗೆ ದೇವಸ್ಥಾನದ ಮುಖ್ಯ ಅರ್ಚಕ ಎ ಕೆ ಸುದೀರ್ ನಂಬೂದರಿ ಅವರು ದೇವಸ್ಥಾನದ ಗರ್ಭಗುಡಿಯನ್ನು ತಂತ್ರಿಗಳಾದ ಕಂಡರಾರು ರಾಜೀವರು ಅವರ ಸಮ್ಮುಖದಲ್ಲಿ ತೆರೆಯಲಿದ್ದಾರೆ.

ಇದನ್ನೂ ಓದಿ: ಶಬರಿಮಲೆ : ಭಕ್ತರಿಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದ ಸರ್ಕಾರ

ಇಂದು ಸಂಜೆ ಶಬರಿಮಲೆಯ ನೂತನ ಮುಖ್ಯ ಅರ್ಚಕ ವಿ ಕೆ ಜಯರಾಜ್ ಪೊಟ್ಟಿ ಮತ್ತು ಮಲಿಕಾಪ್ಪುರಂ ಮುಖ್ಯ ಅರ್ಚಕ ಎಂ ಎನ್ ರಾಜಿಕುಮಾರ್ ದೇವಸ್ಥಾನಕ್ಕೆ ಆಗಮಿಸಲಿದ್ದಾರೆ. ಸಾಂಪ್ರದಾಯಿಕ ಪೂಜೆಗಳು ನೆರವೇರಿದ ಬಳಿಕ ಸ್ಥಳೀಯ ದೇವಸ್ಥಾನದ ಸಿಬ್ಬಂದಿ ದರ್ಶನ ಪಡೆಯಲಿದ್ದಾರೆ. ಯಾತ್ರಿಕರಿಗೆ ನಾಳೆಯಿಂದ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

ನಾಳೆ ಸೋಮವಾರ ವೃಶ್ಚಿಕದ ಮೊದಲ ದಿನ ನೂತನ ಮುಖ್ಯ ಅರ್ಚಕ ದೇವಸ್ಥಾನದಲ್ಲಿ ಸಾಂಪ್ರದಾಯಗಳನ್ನು ನೆರವೇರಿಸಲಿದ್ದಾರೆ. ಕೋವಿಡ್-19 ನಿಯಮಗಳು ಜಾರಿಯಲ್ಲಿರುವುದರಿಂದ ದಿನಕ್ಕೆ ಸಾವಿರ ಭಕ್ತರಿಗೆ ಮಾತ್ರ ಒಳಗೆ ಹೋಗಲು ಅವಕಾಶವಿರುತ್ತದೆ.

LEAVE A REPLY

Please enter your comment!
Please enter your name here