BIG NEWS| ಜ.1 ರಿಂದ ಶಾಲೆ – ಕಾಲೇಜು ಆರಂಭ | ಹಾಜರಾತಿ ಕಡ್ಡಾಯವಲ್ಲ

0
169
Tap to know MORE!

ಬೆಂಗಳೂರು ಡಿ.19: ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಶಾಲಾ-ಕಾಲೇಜು ಪುನರಾರಂಭದ ಸಭೆಯಲ್ಲಿ, ಜನವರಿ 1ರಿಂದ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಆರಂಭಿಸುವ ಬಗ್ಗೆ ತೀರ್ಮಾನ ಕೈಗೊಂಡಿದೆ. ಆದರೆ ಶಾಲೆಗಳಲ್ಲಿ ಬಿಸಿಯೂಟವನ್ನು ತಾತ್ಕಾಲಿಕವಾಗಿ ನಿಲುಗಡೆ ಮಾಡಲಾಗಿದೆ.

ಈ ಕುರಿತಂತೆ ಸಭೆಯ ಬಳಿಕ ಮಾಹಿತಿ ನೀಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ಜನವರಿ 1ರಿಂದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಪುನರಾರಂಭಿಸಲಾಗಿದೆ. 2021ರ ಜನವರಿ 1 ರಿಂದ, 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿ ಹಾಗೂ 6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭ ಮಾಡಲಾಗುತ್ತಿದೆ ಎಂದರು.

ಇದನ್ನೂ ಓದಿ: “ಬೆಂಗಳೂರು ಮಿಷನ್ 2022” – ತಮ್ಮ ಕನಸಿನ ಪರಿಕಲ್ಪನೆಯನ್ನು ತೆರೆದಿಟ್ಟ ಸಿಎಂ ಬಿಎಸ್‌ವೈ

ಇನ್ನೂ ಮುಂದುವರೆದು ಮಾತನಾಡಿದಂತ ಅವರು, ವಿದ್ಯಾಗಮವನ್ನು ಈ ಬಾರಿ ಹೊಸ ರೂಪದಲ್ಲಿ ಆರಂಭಿಸಲಾಗುತ್ತಿದೆ. ವಿದ್ಯಾರ್ಥಿಗಳ ಬಳಿಗೆ ಶಿಕ್ಷಕರು ತೆರಳಿ ಪಾಠ ಮಾಡುತ್ತಿದ್ದ ಕ್ರಮದ ಬದಲಾಗಿ ಶಾಲಾ ಆವರಣದಲ್ಲಿಯೇ ವಿದ್ಯಾಗಮ ನಡೆಸಲಾಗುತ್ತದೆ. ಕೋವಿಡ್-19 ಸೋಂಕಿನ ಲಕ್ಷಣಗಳಿರುವಂತ ಮಕ್ಕಳಿಗೆ ಕಡ್ಡಾಯವಾಗಿ ಕೊರೋನಾ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಜನವರಿ 1ರಿಂದ ಶಾಲೆ ಆರಂಭಗೊಂಡರು ವಿದ್ಯಾರ್ಥಿಗಳಿಗೆ ತರಗತಿಗೆ ಹಾಜರಾಗುವುದು ಕಡ್ಡಾಯವಿಲ್ಲ. ಆನ್ ಲೈನ್, ಆಫ್ ಲೈನ್ ಮೂಲಕವೂ ತರಗತಿ ಕಲಿಕೆಗೆ ಹಾಜರಾಗಬಹುದಾಗಿದೆ ಎಂದು ಹೇಳಿದರು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಈ ಬಾರಿ ಸದ್ಯಕ್ಕೆ ಬಿಸಿಯೂಟ ನೀಡುತ್ತಿಲ್ಲ. ಇದರ ಬದಲಾಗಿ ವಿದ್ಯಾರ್ಥಿಗಳಿಗೆ ಆ ಪ್ರಮಾಣದ ರೇಷನ್ ಅನ್ನು ಮನೆಗೆ ತಲುಪಿಸಲಾಗುತ್ತಿದೆ. ವಿದ್ಯಾರ್ಥಿಗಳು ತರಗತಿಗೆ ಹಾಜರಾಗಲು ಪೋಷಕರ ಒಪ್ಪಿಗೆ ಪತ್ರ ತರಬೇಕು. ಜನವರಿ 15ರ ನಂತ್ರ ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ಅಲ್ಲದೇ ಇತರೆ ತರಗತಿಗಳ ಪುನರಾರಂಭದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಸದ್ಯಕ್ಕೆ ಜನವರಿ 1ರಿಂದ ರಾಜ್ಯದಲ್ಲಿ ಬೋರ್ಡ್ ಪರೀಕ್ಷೆಗಳಿರುವಂತ ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ತರಗತಿಗಳನ್ನು ಪುನರಾರಂಭಿಸಲಾಗುತ್ತದೆ ಎಂದರು.

ಹದಿಹರೆಯದಲ್ಲೇ ದೇಶಕ್ಕಾಗಿ ಪ್ರಾಣವನ್ನೇ ಅರ್ಪಿಸಿದ ಕ್ರಾಂತಿಕಾರಿ ಯುವಕ ಪ್ರಪುಲ್ಲಾ ಚಂದ್ರ ಚಾಕಿ

LEAVE A REPLY

Please enter your comment!
Please enter your name here