ತೋಕೂರು : ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕರಿಗೆ ಅಭಿನಂದನಾ ಸಮಾರಂಭ

0
221
Tap to know MORE!

ನಿರಂತರ ಅಧ್ಯಯನ ಶೀಲತೆ ಹಾಗೂ ಸಂಶೋಧನಾತ್ಮಕ ಗುಣ ಮೌಲ್ಯ ಹೊಂದಿದ ಶಿಕ್ಷಕರಿಂದ ಮಾತ್ರ ಪರಿಣಾಮಕಾರಿ ಬೋಧನೆ ಸಾದ್ಯ ಎಂದು ರೋಟರಿ ಆಂಗ್ಲ ಮಾಧ್ಯಮ ಶಾಲೆ ಕಿನ್ನಿಗೋಳಿ ಇದರ ಪ್ರಾಂಶುಪಾಲೆ ಶ್ರೀಮತಿ ಸುನೀತಾ ಗುರುರಾಜ್ ಎಸ್.ಕೋಡಿ ಇವರು ಹೇಳಿದರು.

ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ) ತೋಕೂರು, ಹಳೆಯಂಗಡಿ ಇದರ ಆಶ್ರಯದಲ್ಲಿ, ಸಂಸ್ಥೆಯ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕರಿಗೆ ಅಭಿನಂದನಾ ಸಮಾರಂಭ ನಡೆಯಿತು.

ತೋಕೂರು : ಜೀವನ ಕೌಶಲ್ಯ ತರಬೇತಿ ಕಾರ್ಯಾಗಾರ

ಡಾ|ಸರ್ವಪಳ್ಳಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಉದ್ಯಮಿ ಶ್ರೀ ರವಿಶೆಟ್ಟಿ ಪುನರೂರು ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸಮಾಜದಲ್ಲಿ ಶಿಕ್ಷಕರನ್ನು ಗುರುತಿಸಿ ಅವರನ್ನು ಶಿಕ್ಷಕರ ದಿನಾಚರಣೆಯಂದು ಅಭಿನಂದಿಸಿರುವುದು ಅಭಿನಂದನಾರ್ಹ ಎಂದು ಹೇಳಿ ಕಾರ್ಯಕ್ರಮಕ್ಕೆ ಶುಭಾಶಯಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀ ಸುಕುಮಾರ್ ಬೊಳ್ಳೂರು ಮತ್ತು ಶ್ರೀ ಲಕ್ಷ್ಮಣ್ ಶೆಟ್ಟಿಗಾರ್ ಕಲ್ಲಾಪು ಇವರನ್ನು ಗೌರವಿಸಲಾಯಿತು

ಸಂಸ್ಥೆಯ ಅಧ್ಯಕ್ಷರು ಶ್ರೀ ಸಂತೋಷ್ ದೇವಾಡಿಗ, ಕಾರ್ಯಕಾರಿ ಸಮಿತಿ ಅಧ್ಯಕ್ಷರು ಶ್ರೀ ಸುರೇಶ್ ಶೆಟ್ಟಿ, ಮಹಿಳಾ ಸಮಿತಿ ಕಾರ್ಯಧ್ಯಕ್ಷೆ ಶ್ರೀಮತಿ ವಾಣಿ ಮಹೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜೊತೆ ಕಾರ್ಯದರ್ಶಿ ಶ್ರೀ ಗಣೇಶ್ ದೇವಾಡಿಗ ಮತ್ತು ಮಹಿಳಾ ಸದಸ್ಯೆ ಶ್ರೀಮತಿ ಸುಜಾತ ನಾರಾಯಣ ಜಿ ಕೆ ಸನ್ಮಾನ ಪತ್ರ ವಾಚಿಸಿದರು. ಮಹಿಳಾ ಸದಸ್ಯರು ನಾಡಗೀತೆಯನ್ನು ಹಾಡಿದರು.

ಅಧ್ಯಕ್ಷರಾಗಿರುವ ಶ್ರೀ ಸಂತೋಷ್ ದೇವಾಡಿಗ ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀ ಜಗದೀಶ್ ಕುಲಾಲ್ ವಂದಿಸಿದರು. ಸದಸ್ಯೆ ಶ್ರೀಮತಿ ಸುರೇಖಾ ರಾಕೇಶ್ ಕಾರ್ಯಕ್ರಮವನ್ನು ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪಧಾದಿಕಾರಿಗಳು,ಸದಸ್ಯರು, ಸದಸ್ಯೆಯರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here