ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಮುಖ್ಯಮಂತ್ರಿಯವರಿಂದ ಶಂಕುಸ್ಥಾಪನೆ

0
235
Tap to know MORE!

ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಜೂನ್ 15 ರ ಸೋಮವಾರ, ತಮ್ಮ ತವರು ಜಿಲ್ಲೆಯಾದ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಕಾರ್ಯಕ್ಕೆ ಶಂಕುಸ್ಥಾಪನೆ ಮಾಡಿದರು.

ಮುಖ್ಯಮಂತ್ರಿಗಳು ಬೆಂಗಳೂರಿನ ತಮ್ಮ ಗೃಹ ಕಚೇರಿಯಿಂದ, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಈ ಕಾರ್ಯವನ್ನು ನೆರವೇರಿಸಿದ್ದಾರೆ.

ಶಿವಮೊಗ್ಗದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹೊಸ ವಿಭಾಗೀಯ ಪ್ರಧಾನ ಕಚೇರಿ ಕಟ್ಟಡದ ಕಾಮಗಾರಿಯ ಬಗ್ಗೆಯೂ ಅವರು ಘೋಷಿಸಿದರು.

ಉಪಮುಖ್ಯಮಂತ್ರಿ ಗೋವಿಂದ ಎಂ ಕಾರ್ಜೋಳ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ್, ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್, ಮೂಲಸೌಕರ್ಯ ವಿಭಾಗದ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್ ಮತ್ತು ಇನ್ನಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here