ಕೇಂದ್ರದ ಕೃಷಿ ಹಾಗೂ ರೈತ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆಯಾಗಿ ಕಾರ್ಯಭಾರ ಆರಂಭಿಸಿದ ಶೋಭಾ ಕರಂದ್ಲಾಜೆ

0
170
Tap to know MORE!

ನವದೆಹಲಿ : ಪ್ರಧಾನಿ ನರೇಂದ್ರ ಮೋದ ಸಾರಥ್ಯದ ಕೇಂದ್ರ ಸರ್ಕಾರದ ನೂತನ ಸಚಿವ ಸಂಪುಟದಲ್ಲಿ ಸ್ಥಾನ ಪಡೆದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಇಂದು (ಗುರುವಾರ, ಜುಲೈ 8) ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಕಾರ್ಯಭಾರ ಆರಂಭಿಸಿದ್ದಾರೆ.

ಜುಲೈ 7 ರಂದು ಮೋದಿ ಸರ್ಕಾರದ ನೂತನ ಸಚಿವ ಸಂಪುಟಕ್ಕೆ ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದ ಕರಂದ್ಲಾಜೆಯವರು ದೆಹಲಿಯ ಕೃಷಿಭವನದಲ್ಲಿ ಇಂದು ಪದಗ್ರಹಣ ಮಾಡಿದ್ದು ರೈತರ ಸಂಕೇತವಾದ  ಹಸಿರು ಶಾಲು ಧರಿಸಿ ಅವರು ಸಚಿವರ ಕಾರ್ಯಭಾರ ವಹಿಸಿಕೊಂಡಿದ್ದಾರೆ.

ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ | ಯಾರಿಗೆ ಯಾವ ಖಾತೆ?

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

2004ರಲ್ಲಿ ವಿಧಾನ ಪರಿಷತ್ತಿಗೆ, 2008ರಲ್ಲಿ ಯಶವಂತಪುರ ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾಗಿ ಸಚಿವರಾದರು. 2014ರ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಮಹಿಳಾ ಸಬಲೀಕರಣ ಸಮಿತಿ, ರಕ್ಷಣಾ ಸ್ಥಾಯೀ ಸಮಿತಿ, ಕೃಷಿ ಸಚಿವಾಲಯ ಸಲಹಾ ಸಮಿತಿ ಸದಸ್ಯೆಯಾದರು. 2019ರಲ್ಲಿ ಇದೇ ಕ್ಷೇತ್ರದಿಂದ ಮರು ಆಯ್ಕೆಯಾದರು. ಈಗ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

LEAVE A REPLY

Please enter your comment!
Please enter your name here