ಶ್ರೀನಗರ : ಉಗ್ರರ ದಾಳಿಗೆ ಇಬ್ಬರು ಸಿಆರ್‌ಪಿಎಫ್ ಯೋಧರು ಹುತಾತ್ಮ

0
124
Tap to know MORE!

ಜಮ್ಮು-ಕಾಶ್ಮೀರದ ಶ್ರೀನಗರದ ಹೊರವಲಯದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಇಬ್ಬರು ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ.

ಸಿಆರ್‌ಪಿಎಫ್ ಸಿಬ್ಬಂದಿಗಳು ಹೆದ್ದಾರಿಯಲ್ಲಿ ರಕ್ಷಣೆಯ ಕರ್ತವ್ಯದಲ್ಲಿದ್ದ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದರೆಂದು ಪೊಲೀಸರು ತಿಳಿಸಿದ್ದಾರೆ.

ಘರ್ಷಣೆಯಲ್ಲಿ ಐವರು ಸಿಆರ್‌ಪಿಎಫ್‍ ಸಿಬ್ಬಂದಿಗಳು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗಿದೆ ಇಬ್ಬರು ಯೋಧರು ಮೃತಪಟ್ಟಿದ್ದಾರೆ ಎಂದು ಎಂದು ಸಿಆರ್‌ಪಿಎಫ್ ನ ಹಿರಿಯ ಅಧಿಕಾರಿಯೊಬ್ಬರು ಯುಎನ್‌ಐಗೆ ತಿಳಿಸಿದ್ದಾರೆ.

ಹೆಚ್ಚುವರಿ ಭದ್ರತಾ ಪಡೆಗಳನ್ನು ಘಟನಾ ಸ್ಥಳಕ್ಕೆ ತಕ್ಷಣವೇ ನಿಯೋಜಿಸಲಾಗಿದ್ದು, ಇಡೀ ಪ್ರದೇಶವನ್ನು ಸುತ್ತುವರಿಯಲಾಗಿದೆ. ಅಲ್ಲದೆ ತೀವ್ರ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

ಭಯೋತ್ಪಾದಕರು ಪರಾರಿಯಾಗಿದ್ದಾರೆಯೇ ಎಂದು ಇನ್ನೂ ಸ್ಪಷ್ಟವಾಗಿಲ್ಲ. ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಪ್ರದೇಶವನ್ನು ಸುತ್ತುವರಿಯಲಾಗಿದೆ ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here