ಶ್ವಾಸನಾಳದಲ್ಲಿ ಜೀರುಂಡೆ ಸಿಲುಕಿ ಒಂದು ವರ್ಷದ ಮಗು ಮೃತ್ಯು

0
265
Tap to know MORE!

ಕಾಸರಗೋಡು: ಶ್ವಾಸನಾಳದಲ್ಲಿ ಜೀರುಂಡೆ ಸಿಲುಕಿ ಒಂದು ವರ್ಷದ ಮಗು ಮೃತಪಟ್ಟ ಘಟನೆ ನಡೆದಿದೆ. ತಾಲೂಕಿನ ಹೊರವಲಯದ ನುಳ್ಳಿಪ್ಪಾಡಿಯ ಚೆನ್ನಿಕೆರೆಯ ಸತ್ಯೇಂದ್ರ ಹಾಗೂ ರಂಜಿನಿ ಎಂಬವರ ಮಗು ಮೃತಪಟ್ಟ ದುರ್ಧೈವಿ.

ಶನಿವಾರ ರಾತ್ರಿ ಮನೆಯಲ್ಲಿ ಆಟವಾಡುತ್ತಿದ್ದ ಬಾಲಕ ಪ್ರಜ್ಞೆ ತಪ್ಪಿ ಬಿದ್ದಿದ್ದು ಕೂಡಲೇ ಮನೆಯವರು ಆಸ್ಪತ್ರೆಗೆ ತಲಪಿಸಿದರೂ ಮಗು ಮೃತಪಟ್ಟಿತ್ತು. ತಪಾಸಣೆಯಿಂದ ಮಗುವಿನ ಸಾವಿಗೆ ಕಾರಣ ತಿಳಿದುಬಂದಿರಲಿಲ್ಲ.

ಇಂದು ಮಗುವಿನ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಶ್ವಾಸನಾಳದಲ್ಲಿ ಸಣ್ಣ ಜೀರುಂಡೆ ಮರಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆಟವಾಡುತ್ತಿದ್ದ ಸಂದರ್ಭದಲ್ಲಿ ಮಗು ಜೀರುಂಡೆ ಮರಿಯನ್ನು ನುಂಗಿ ಉಸಿರುಗಟ್ಟಿ ಸಾವನಪ್ಪಿರಬಹುದೆಂದು ಶಂಕಿಸಲಾಗಿದೆ.

LEAVE A REPLY

Please enter your comment!
Please enter your name here