ತೋಕೂರು : ಷಷ್ಠಿ ಮಹೋತ್ಸವದ ಪೂರ್ವಭಾವಿಯಾಗಿ ಸ್ವಚ್ಛತಾ ಕಾರ್ಯಕ್ರಮ

0
145
Tap to know MORE!

ತೋಕೂರು: ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ , ತೋಕೂರು, ಹಳೆಯಂಗಡಿ, ಇದರ ಆಶ್ರಯದಲ್ಲಿ ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ದೇವಸ್ಥಾನದ ಷಷ್ಠಿ ಮಹೋತ್ಸವದ ಪೂರ್ವಭಾವಿಯಾಗಿ ರಥೋತ್ಸವ ಗದ್ದೆಯಲ್ಲಿ ಭಾನುವಾರ ಸ್ವಚ್ಛತೆಯನ್ನು ಮಾಡಲಾಯಿತು.

ಸ್ವಚ್ಛತೆಯಿಂದ ಸಂಘಟನಾ ಶಕ್ತಿಗೆ ಬಲ ಬಂದಿದ್ದು ಪರಿಸರ ಆರೋಗ್ಯಯುತವಾಗಿ ಬೆಳೆದು ಸಮಾನತೆಯ ದೂರದೃಷ್ಟಿತ್ವಕ್ಕೆ ಸಹಕಾರಿಯಾಗಿದೆ. ಎಂದು ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಶ್ರೀ ಹರಿದಾಸ್ ಭಟ್ ಹೇಳಿದರು.

ಇದನ್ನೂ ಓದಿ: ತೋಕೂರು : “ಸ್ಪೋರ್ಟ್ಸ್ ಕ್ಲಬ್ ನಲ್ಲಿ ತುಡರ್ ಪರ್ಬ -2020” ಆಚರಣೆ

ಈ ಸ್ವಚ್ಛತಾ ಕಾರ್ಯದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಶ್ರೀ ಹರಿದಾಸ್ ಭಟ್, ಸದಸ್ಯರು ಶ್ರೀ ಲೋಕಯ್ಯ ಸಾಲ್ಯಾನ್, ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರು ಶ್ರೀ ಮೋಹನ್ ದಾಸ್, ಗ್ರಾಮ ಪಂಚಾಯತ್ ಪಡುಪಣಂಬೂರು ಇದರ ಕಾರ್ಯದರ್ಶಿ ಶ್ರೀ ಲೋಕನಾಥ್ ಭಂಡಾರಿ, ಪಂಚಾಯತ್ ಮಾಜಿ ಸದಸ್ಯರಾದ ಶ್ರೀ ಹೇಮನಾಥ ಅಮೀನ್, ಶ್ರೀ ಸಂತೋಷ್ ಕುಮಾರ್, ಸ್ಪೋರ್ಟ್ಸ್ ಕ್ಲಬ್ ನ ಗೌರವ ಅಧ್ಯಕ್ಷರು ಶ್ರೀ ನಾರಾಯಣ ಜಿ. ಕೆ., ಅಧ್ಯಕ್ಷರು ಶ್ರೀ ಸಂತೋಷ್ ದೇವಾಡಿಗ, ಕಾರ್ಯಾಧ್ಯಕ್ಷರು ಶ್ರೀ ಸುರೇಶ್ ಶೆಟ್ಟಿ, ಮಹಿಳಾ ಕಾರ್ಯಾಧ್ಯಕ್ಷೆ ಶ್ರೀಮತಿ ವಾಣಿ ಮಹೇಶ್, ಶ್ರೀ ಶ್ಯಾಂ ಪೂಜಾರಿ ಕಲ್ಲಾಪು, ಸ್ಪೋರ್ಟ್ಸ್ ಕ್ಲಬ್ ನ ಪದಾಧಿಕಾರಿಗಳು, ಸದಸ್ಯರು, ಸದಸ್ಯೆಯರು, ಸ್ಪೋರ್ಟ್ಸ್ ಕ್ಲಬ್ ನ ನೃತ್ಯ, ಸಂಗೀತ, ಹಾಗೂ ಕರಾಟೆ ತರಗತಿಯ ಮಕ್ಕಳು ಈ ಸ್ವಚ್ಛತಾ ಕಾರ್ಯದಲ್ಲಿ ಬಾಗವಹಿಸಿದರು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here