ಡ್ರಗ್ಸ್ ದಂಧೆ : ನಟಿ ಸಂಜನಾ ಗಲ್ರಾನಿ ಅರೆಸ್ಟ್!

0
213
Tap to know MORE!

ಬೆಂಗಳೂರು: ಕನ್ನಡ ಚಲನಚಿತ್ರೋದ್ಯಮದಲ್ಲಿ ಮಾದಕ ದ್ರವ್ಯ ಸೇವನೆ ಕುರಿತು ತನಿಖೆ ನಡೆಸುತ್ತಿರುವ ಕೇಂದ್ರ ಅಪರಾಧ ವಿಭಾಗವು ನಟಿ ಸಂಜನಾ ಗಲ್ರಾನಿಯನ್ನು ಮಂಗಳವಾರ ಬಂಧಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನಗರದ ಉನ್ನತ ಮಟ್ಟದ ಪಾರ್ಟಿಗಳಲ್ಲಿ ಜನರಿಗೆ ಡ್ರಗ್ಸ್ ಸರಬರಾಜು ಮಾಡಿದ್ದಕ್ಕಾಗಿ ನಟಿ ರಾಗಿಣಿ ದ್ವಿವೇದಿ ಅವರನ್ನು ನಗರ ಪೊಲೀಸರು ಬಂಧಿಸಿದ ಬಳಿಕ, ಈ ಬೆಳವಣಿಗೆ ಕಂಡುಬಂದಿದೆ.

ಇಂದು ಮುಂಜಾನೆ ಇಲ್ಲಿನ ಇಂದಿರಾನಗರ ನಿವಾಸದಲ್ಲಿ ನಡೆದ ಸಿಸಿಬಿ ದಾಳಿಯ ಬಳಿಕ ಸಂಜನಾರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು. ಹೆಚ್ಚಿನ ವಿಚಾರಣೆಗಾಗಿ ನಟಿಯನ್ನು ಸಿಸಿಬಿ ಕಚೇರಿಗೆ ಕರೆದೊಯ್ಯಲಾಯಿತು.

“ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದ ನಂತರ, ಸಂಜನಾ ಅವರ ಮನೆಯಲ್ಲಿ ಶೋಧ ನಡೆಸಲಾಗಿದೆ” ಎಂದು ಬೆಂಗಳೂರು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಏತನ್ಮಧ್ಯೆ, ಚಲನಚಿತ್ರೋದ್ಯಮದಲ್ಲಿ ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ ಇದುವರೆಗೆ 13 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರು ಮಂದಿಯನ್ನು ಬಂಧಿಸಲಾಗಿದೆ.

LEAVE A REPLY

Please enter your comment!
Please enter your name here