ಮುಂದಿನ 2-3 ದಿನಗಳಲ್ಲಿ ಸಂಪುಟ ವಿಸ್ತರಣೆ : ಮುಖ್ಯಮಂತ್ರಿ ಯಡಿಯೂರಪ್ಪ

0
143
ಯಡಿಯೂರಪ್ಪ, ಲವ್‌ ಜಿಹಾದ್‌,
ಪ್ರಾತಿನಿಧಿಕ ಚಿತ್ರ
Tap to know MORE!

ಚಿತ್ರದುರ್ಗ: ಸಂಪುಟ ವಿಸ್ತರಣೆ ಕುರಿತು ಯಾವುದೇ ಗೊಂದಲಗಳಿಲ್ಲ. ಇನ್ನೂ 2-3 ದಿನಗಳಲ್ಲಿ ಸಂಪುಟ ವಿಸ್ತರಣೆಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಸ್ತರಣೆ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಎಲ್ಲವೂ ಸರಿ ಹೋಗುತ್ತದೆ. ವಿಸ್ತರಣೆ ಕುರಿತು ಸಾಧ್ಯವಾದಲ್ಲಿ ಹೈಕಮಾಂಡ್ ಜೊತೆ ಚರ್ಚಿಸುತ್ತೇನೆ. ಪಟ್ಟಿ ಬೇಗ ಕ್ಲಿಯರ್ ಮಾಡಿಕೊಡುವಂತೆ ಮನವಿ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಮುಂದಿನ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಮಸೂದೆ ಮಂಡನೆ : ಸಚಿವ ಪ್ರಭು ಚೌಹಾಣ್

ಯಾರು ಯಾರು ಸಚಿವರಾಗುತ್ತಾರೆಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತಿದ್ದಾರೆಂದ ಅವರು ಪಕ್ಷ ಅಧಿಕಾರಕ್ಕೆ ಬರುವ ಸಲುವಾತಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳನ್ನು ತೊರೆದು ಬಂದಿದ್ದ ಬಂಡಾಯ ನಾಯಕರಿಗೆ ಸಚಿವ ಸ್ಥಾನ ನೀಡಲಿದ್ದಾರೆಯೇ ಎಂಬ ಪ್ರಶ್ನೆಗ ಉತ್ತರಿಸಲು ನಿರಾಕರಿಸಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here