ಇಂದಿನಿಂದ ಚಂದನ ವಾಹಿನಿಯಲ್ಲಿ 5,6,7 ನೇ ತರಗತಿ ವಿದ್ಯಾರ್ಥಿಗಳಿಗೆ “ಸಂವೇದ ಇ-ಕ್ಲಾಸ್” ಆರಂಭ

0
161
Tap to know MORE!

ಬೆಂಗಳೂರು : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಶಾಲೆಗಳು ವಿಳಂಬವಾಗಿ ಪ್ರಾರಂಭವಾಗುತ್ತಿರುವುದರಿಂದ ಹಾಗೂ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನಷ್ಟ ಉಂಟಾಗುತ್ತಿರುವುದರಿಂದ ವಿದ್ಯಾರ್ಥಿಗಳು ತಮ್ಮ ತಮ್ಮ ಮನೆಯಲ್ಲೇ ಕಲಿಯಲು ಅವಕಾಶ ಕಲ್ಪಿಸುವ ಉದ್ದೇಶದಿಂದ 5, 6 ಮತ್ತು 7 ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂವೇದ ಇ-ಕ್ಲಾಸ್ ಕಲಿಕಾ ಕಾರ್ಯಕ್ರಮವನ್ನು ಇಂದಿನಿಂದ ದೂರದರ್ಶನದಲ್ಲಿ ಪ್ರಸಾರವಾಗಲಿದೆ.

5,6 ಮತ್ತು 7 ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂವೇದ ಇ-ಕಲಿಕೆಯನ್ನು ಪ್ರಥಮ ಭಾಷೆ ಕನ್ನಡ, ದ್ವಿತೀಯ ಭಾಷೆ ಇಂಗ್ಲಿಷ್ ಮತ್ತು ತೃತೀಯ ಭಾಷೆ ಹಿಂದಿ ಹಾಗೂ ಕನ್ನಡ ಮಾಧ್ಯಮದಲ್ಲಿ ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ವಿಷಯದಲ್ಲಿ ವಿಡಿಯೋ ಪಾಠಗಳನ್ನು ಸೋಮವಾರದಿಂದ ಶುಕ್ರವಾರದ ವರೆಗೆ ಬೆಳಗ್ಗೆ 8 ಗಂಟೆಯಿಂದ 9.30 ರವರೆಗೆ ಮತ್ತು ಸಂಜೆ 5.30 ರಿಂದ 6 ಗಂಟೆಯವರೆಗೆ ಪ್ರತಿ ದಿನ 4 ಪಾಠಗಳನ್ನು ಪ್ರತಿ ಅವಧಿ 30 ನಿಮಿಷ ಮೀರದಂತೆ 2 ಗಂಟೆ ದೂರದರ್ಶನ ಚಂದನವಾಹಿನಿಯಲ್ಲಿ ಪ್ರಸಾರ ಮಾಡಲಾಗುತ್ತದೆ.

LEAVE A REPLY

Please enter your comment!
Please enter your name here