ಕೋವಿಡ್ ಭೀತಿ: ಸಂಸತ್ ಚಳಿಗಾಲದ ಅಧಿವೇಶನ ರದ್ದು!

0
192
Tap to know MORE!

ನವದೆಹಲಿ: ಕೋವಿಡ್‌–19 ಪಿಡುಗಿನ ಹಿನ್ನೆಲೆಯಲ್ಲಿ ಸಂಸತ್‌ನ ಚಳಿಗಾಲದ ಅಧಿವೇಶನ ನಡೆಸುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಅಲ್ಲದೇ, ಜನವರಿಯಲ್ಲಿ ಬಜೆಟ್‌ ಅಧಿವೇಶನ ನಡೆಸುವ ಇಂಗಿತವನ್ನು ವ್ಯಕ್ತಪಡಿಸಿದೆ.

ಲೋಕಸಭೆಯಲ್ಲಿ ಕಾಂಗ್ರೆಸ್‌ ನಾಯಕ ಅಧಿರ್‌ ರಂಜನ್‌ ಚೌಧರಿ ಅವರಿಗೆ ಬರೆದಿರುವ ಪತ್ರದಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ಈ ವಿಷಯ ತಿಳಿಸಿದ್ದಾರೆ.

ಇದನ್ನೂ ಓದಿ: ಪಿಎಂ-ವಾಣಿ | ಸಾರ್ವಜನಿಕ ವೈ-ಫೈ ಕೇಂದ್ರಗಳನ್ನು ಸ್ಥಾಪಿಸಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ

‘ಕೋವಿಡ್‌–19 ಪಿಡುಗಿನ ಕಾರಣ ಚಳಿಗಾಲದ ಅವಧಿಯಲ್ಲಿ ಹೆಚ್ಚು ಎಚ್ಚರಿಕೆ ಅಗತ್ಯ. ಇತ್ತೀಚಿನ ಕೆಲ ದಿನಗಳಲ್ಲಿ ದೆಹಲಿ ಸೇರಿದಂತೆ ಕೆಲವೆಡೆ ಕೋವಿಡ್‌ ಪ್ರಕರಣಗಳಲ್ಲಿ ದಿಢೀರ್‌ ಹೆಚ್ಚಳವೂ ಕಂಡುಬಂದಿದೆ. ಹೀಗಾಗಿ ಚಳಿಗಾಲದ ಅಧಿವೇಶನ ನಡೆಸದಿರಲು ತೀರ್ಮಾನಿಸಲಾಗಿದೆ’ ಎಂದು ಸಚಿವ ಜೋಶಿ ವಿವರಿಸಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

‘ಅಧಿವೇಶನ ನಡೆಸದೇ ಇರುವ ಕುರಿತಂತೆ ಎಲ್ಲ ಪಕ್ಷಗಳ ಸಭಾನಾಯಕರೊಂದಿಗೆ ಚರ್ಚೆ ನಡೆಸಲಾಗಿದೆ. ಕೋವಿಡ್‌ ಪಿಡುಗಿನ ಬಗ್ಗೆ ಕಳವಳ ವ್ಯಕ್ತಪಡಿಸಿರುವ ನಾಯಕರು, ಅಧಿವೇಶನ ರದ್ದುಪಡಿಸುವ ಬಗ್ಗೆಯೂ ಸಹಮತ ವ್ಯಕ್ತಪಡಿಸಿದ್ದಾರೆ‘ ಎಂದು ಜೋಶಿ ತಿಳಿಸಿದ್ದಾರೆ.

80 ಕೆಜಿ ಭಾರ ಎತ್ತಿ ದಾಖಲೆ ಬರೆದ 7 ವರ್ಷದ ಬಾಲಕಿ!

LEAVE A REPLY

Please enter your comment!
Please enter your name here