ಆಸ್ಕರ್ ಫೆರ್ನಾಂಡಿಸ್‌ಗೆ ಐಸಿಯುನಲ್ಲಿ ಚಿಕಿತ್ಸೆ ; ವದಂತಿ ಹರಡಬೇಡಿ: ಕುಟುಂಬಸ್ಥರ ಮನವಿ

0
257
Tap to know MORE!

ಮಂಗಳೂರು : ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರು ಮಂಗಳೂರಿನ ಯನೆಪೋಯ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ನಿಧನರಾಗಿದ್ದಾರೆ ಎಂಬುದು ಸುಳ್ಳು ಸುದ್ದಿ ಎಂದು ಅವರ ಕುಟುಂಬದ ಮೂಲಗಳು ತಿಳಿಸಿದೆ.

ತೀವ್ರ ಅಸ್ವಸ್ಥರಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿರುವ ಆಸ್ಕರ್ ಫೆರ್ನಾಂಡಿಸ್ ನಿಧನರಾಗಿದ್ದಾರೆ ಎಂದು ಗುರುವಾರ ರಾತ್ರಿ ವದಂತಿ ಹರಡಿದೆ. ಆದರೆ ಅವರಿಗೆ ಈಗಲೂ ಚಿಕಿತ್ಸೆ ನಡೆಯುತ್ತಿದ್ದು ಅವರು ಚೇತರಿಸಿಕೊಳ್ಳುವಂತೆ ಪ್ರಾರ್ಥಿಸಿ ಹಾಗು ವದಂತಿ ಹರಡಬೇಡಿ ಎಂದು ಅವರ ಕುಟುಂಬ ಪ್ರಕಟನೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here