ಈಗಾಗಲೇ ರಾಜ್ಯದ ಅನೇಕ ಜನಪ್ರತಿನಿಧಿಗಳಿಗೆ ಕೊರೋನಾ ತಗುಲಿದೆ. ಇದೀಗ ಸಚಿವ ಕೆ ಎಸ್ ಈಶ್ವರಪ್ಪ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಇದನ್ನೂ ನೋಡಿ : ದೇವಾಲಯಗಳನ್ನು ಮಸೀದಿಗಳಿಂದ ಬಂಧ-ಮುಕ್ತಗೊಳಿಸುವುದೇ ನಿಜವಾದ ಸ್ವಾತಂತ್ರ್ಯ : ಈಶ್ವರಪ್ಪ
ಇತ್ತೀಚೆಗೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆಯವರಿಗೆ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ನನಗೆ ಇಂದು ಕರೊನಾ ಸೋಂಕು ದೃಡ ಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ . ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ.
ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ.
— K S Eshwarappa (@ikseshwarappa) September 1, 2020
ಈ ಕುರಿತಂತೆ ಫೇಸ್ ಬುಕ್ ಹಾಗೂ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನನಗೆ ಇಂದು ಕರೊನಾ ಸೋಂಕು ದೃಡ ಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ . ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ ಎಂಬುದಾಗಿ ತಿಳಿಸಿದ್ದಾರೆ.