ಸಚಿವ ಸಿ.ಟಿ ರವಿಗೆ ಕೊರೋನಾ

0
196
Tap to know MORE!

ಸಂಸದೆ ಸುಮಲತಾ ಅಂಬರೀಶ್, ಶಾಸಕರಾದ ಪ್ರಾಣೇಶ್, ಅಜೇಯ್ ಸಿಂಗ್, ಪುಟ್ಟಣ್ಣಯ್ಯ ಸೇರಿದಂತೆ ಹಲವು ಜನಪ್ರತಿನಿಧಿಗಳಿಗೆ ಕೊರೊನಾ ತಗುಲಿದ. ಎಲ್ಲರೂ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಆದಷ್ಟು ಬೇಗ ಗುಣಮುಖರಾಗಿ ಬರುತ್ತೇವೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಸಚಿವ ಸಿ.ಟಿ.ರವಿ ಅವರಿಗೆ ಕೊರೊನಾ ಸೋಂಕು ತಗುಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.

ಈ ಹಿಂದೆಯೂ ಕೊರೊನಾ ಪರೀಕ್ಷೆಗೆ ಒಳಗಾಗಿದ್ದ ಸಿ.ಟಿ.ರವಿ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದರು. ನೆಗೆಟಿವ್ ವರದಿ ಬಂದ ಬಳಿಕ ಕೆಲಸಗಳಲ್ಲಿ ತೊಡಗಿಕೊಂಡಿದ್ದರು. ಇತ್ತ ಸಿಎಂ ಬಿ.ಎಸ್.ಯಡಿಯೂರಪ್ಪ ಸಹ ಕೊರೊನಾ ಆತಂಕದ ಹಿನ್ನೆಲೆ ಸೆಲ್ಫ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

LEAVE A REPLY

Please enter your comment!
Please enter your name here