ಸಪ್ನಾ ಬುಕ್ ಹೌಸ್ ಸಂಸ್ಥಾಪಕ ಸುರೇಶ್ ಶಾ ನಿಧನ

0
288
Tap to know MORE!

ವರದಿ: ಸಿದ್ಧಾರ್ಥ್

1966ರಲ್ಲಿ ಸಪ್ನಾ ಬುಕ್ ಹೌಸ್ ಮಳಿಗೆಯನ್ನು ಪುಟ್ಟದಾಗಿ ಆರಂಭಿಸಿದ್ದ ಸುರೇಶ್ ಸಿ. ಶಾ ಅವರು ನಂತರ ದಿನಗಳಲ್ಲಿ ಸಪ್ನಾ ಬುಕ್ ಹೌಸ್ ಸಂಸ್ಥೆಯನ್ನು ದೇಶದ ಅತ್ಯಂತ ಪ್ರಮುಖ ಮತ್ತು ಬೃಹತ್ ಪುಸ್ತಕ ಮಳಿಗೆಯನ್ನಾಗಿ ಬೆಳೆಸಿದರು. ಈಗ ಅದು ಭಾರತದ ಅತಿದೊಡ್ಡ ಪುಸ್ತಕ ಮಳಿಗೆ ಎಂದೇ ಹೆಸರಾಗಿದೆ.

ಸುರೇಶ್ ಸಿ. ಶಾ ಅವರು ಇಂದು ಮಧ್ಯಾಹ್ನ 2.15ಕ್ಕೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರರಿಗೆ 94 ವರ್ಷ ವಯಸ್ಸಾಗಿತ್ತು. ಸುರೇಶ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತಮ್ಮ ಕೊನೆಯುಸಿರೆಳೆದರು.

ಒಟ್ಟು 19 ಶಾಖೆಗಳನ್ನು ಹೊಂದಿರುವ ಸಪ್ನಾ ಬುಕ್ ಹೌಸ್ ಕನ್ನಡ ಪುಸ್ತಕಗಳನ್ನು ಓದುಗರಿಗೆ ಹೆಚ್ಚಿನ ಪ್ರಮಾಣದಲ್ಲಿ ತಲುಪಿಸುವ ಕೆಲಸವನ್ನು ಸತತವಾಗಿ ಮಾಡಿಕೊಂಡು ಬರುತ್ತಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಬುಧವಾರ ಬೆಳಗ್ಗೆ ಹರಿಶ್ಚಂದ್ರ ಘಾಟ್ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಸಪ್ನಾದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here