ರಾಜಕೀಯಕ್ಕೆ ಕಾಲಿಟ್ಟ ದ.ಕ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್‌ ಸೆಂಥಿಲ್‌ ?

0
109
sasikanth senthil, ಸಸಿಕಾಂತ್‌ ಸೆಂಥಿಲ್‌, ಸುದ್ದಿವಾಣಿ,
Tap to know MORE!

ಬೆಂಗಳೂರು ನ.8 : ಸಿಂಗಂ ಖ್ಯಾತಿಯ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರ ಬಳಿಕ ಮತ್ತೋರ್ವ ಅಧಿಕಾರಿ, ದ.ಕ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್‌ ಸೆಂಥಿಲ್ ಈಗ ರಾಜಕೀಯಕ್ಕೆ ಪ್ರವೇಶಕ್ಕೆ ಮುಂದಾಗಿದ್ದಾರೆ.

ಕೇಂದ್ರ ಸರ್ಕಾರದ ನೀತಿಗಳಿಂದ ಬೇಸತ್ತು ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ದೂರಿ ಐಎಎಸ್ ಸೇವೆಗೆ ರಾಜೀನಾಮೆ ನಿಡಿದ್ದ ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಶೀಘ್ರವೇ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ. ಈಗಾಗಲೇ ಕಾಂಗ್ರೆಸ್ ನಾಯಕರು ಅವರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ತಮಿಳುನಾಡು ಬಿಜೆಪಿ ಸೇರಿದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ!

ನಾಳೆ(ನ.9) ಬೆಳಿಗ್ಗೆ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಅವರು ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ಹೇಳಿದೆ.

2009ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ 2017ರ ಅಕ್ಟೋಬರ್ 10 ರಿಂದ ದ‌.ಕ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಕಳೆದ ವರ್ಷ ಸೆಪ್ಬಂಬರ್ ನಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಐಎಎಸ್ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದ ಸೆಂಥಿಲ್ ಆ ಬಳಿಕ ಸಿಎಎ ಸೇರಿ ರಾಜ್ಯದಲ್ಲಿ ಹಲವು ಹೋರಾಟಗಳಲ್ಲಿ ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here