ಬೆಂಗಳೂರು : ಸಿಐಡಿ ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆ| ಸ್ನೇಹಿತರ ಮನೆಯಲ್ಲಿ ನೇಣಿಗೆ ಶರಣು

0
183
Tap to know MORE!

ಬೆಂಗಳೂರು, ಡಿ.17: ಸಿಐಡಿ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಿವೈಎಸ್‍ಪಿ ಲಕ್ಷ್ಮೀ (33) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಅನ್ನಪೂರ್ಣೇಶ್ವರಿ ನಗರದ ಸ್ನೇಹಿತರ ಮನೆಯಲ್ಲಿ ಲಕ್ಷ್ಮಿ ಅವರು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಡಿವೈಎಸ್‍ಪಿ ಲಕ್ಷ್ಮಿ ಅವರ ಆತ್ಮಹತ್ಯೆಗೆ ನಿಖರ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ.

ಲಕ್ಷ್ಮಿ ಅವರು 2014ರ ಬ್ಯಾಚ್‍ನ ಕೆಎಸ್‍ಪಿಎಸ್ ಅಧಿಕಾರಿ, 2017ರಲ್ಲಿ ಸಿಐಡಿ ಘಟಕದಲ್ಲಿ ಡಿವೈಎಸ್‍ಪಿ ಆಗಿ ಅವರು ನೇಮಕಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದರು. ಮೂಲತಃ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಮಾಸ್ತಿಯವರಾದ ಲಕ್ಷ್ಮಿ ಅವರು ತಮ್ಮ ಕುಟುಂಬದ ಸದಸ್ಯರ ಜತೆ ಬೆಂಗಳೂರಿನ ಕೋಣನಕುಂಟೆಯಲ್ಲಿ ವಾಸವಾಗಿದ್ದರು.

ಇದನ್ನೂ ಓದಿ: ಸುಳ್ಯ : ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವತಿ!

ರಾತ್ರಿ ಅನ್ನಪೂರ್ಣೇಶ್ವರಿ ನಗರದಲ್ಲಿನ ಸ್ನೇಹಿತರ ಮನೆಗೆ ಹೋಗಿದ್ದ ಲಕ್ಷ್ಮಿ ಅವರು ಪಾರ್ಟಿ ಮಾಡಿದ್ದು, ಬಳಿಕ 10.30ರ ಸುಮಾರಿಗೆ ರೂಂಗೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಸುದ್ದಿ ತಿಳಿದ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು, ಲಕ್ಷ್ಮಿ ಅವರ ಆತ್ಮಹತ್ಯೆಗೆ ಮಾನಸಿಕ ಖಿನ್ನತೆಯೇ ಅಥವಾ ಬೇರೆ ಕಾರಣವಿರಬಹುದೆಂಬ ಶಂಕೆ ವ್ಯಕ್ತಪಡಿಸಿ ತನಿಖೆ ನಡೆಸುತ್ತಿದ್ದಾರೆ.

ಐಐಟಿ ಮದ್ರಾಸ್ : 100ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಕೊರೋನಾ – ಎಲ್ಲಾ ಪ್ರಯೋಗಾಲಯಗಳು ಸೀಲ್‌ಡೌನ್!

LEAVE A REPLY

Please enter your comment!
Please enter your name here