ಬೆಂಗಳೂರು: ಉತ್ತರ ಪ್ರದೇಶದಲ್ಲಿ ಎಲ್ಲಿಯವರೆಗೆ ಯೋಗಿ ಆದಿತ್ಯನಾಥ್ ಸರಕಾರ ಇರುತ್ತದೋ, ಅಲ್ಲಿಯವರೆಗೆ ಅಲ್ಲಿಯ ತನಕ ಆ ರಾಜ್ಯದ ಹೆಣ್ಣು ಮಕ್ಕಳು ಸುರಕ್ಷಿತರಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಉತ್ತರ ಪ್ರದೇಶದಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇದರ ಹೊಣೆಯನ್ನು ಯೋಗಿ ಆದಿತ್ಯನಾಥ್ ಮಾತ್ರವಲ್ಲ, ಅವರನ್ನು ಬೆಂಬಲಿಸುವ ಪ್ರಧಾನಿ ನರೇಂದ್ರ ಮೋದಿ ಮತ್ತು ಸಮಸ್ತ ಸಂಘ ಪರಿವಾರ ಕೂಡಾ ಹೊರಬೇಕಾಗುತ್ತದೆ, ಕೂಡಲೇ ಯೋಗಿ ಆದಿತ್ಯನಾಥ್ ಅವರನ್ನು ಸ್ಥಾನದಿಂದ ಕಿತ್ತು ಉತ್ತರಪ್ರದೇಶವನ್ನು ರಕ್ಷಿಸಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಅತ್ಯಾಚಾರಕ್ಕೊಳಗಾಗಿ ಸಾವಿಗೀಡಾದ ಉತ್ತರಪ್ರದೇಶದ ದಲಿತ ಯುವತಿಗೆ ಗೌರವಪೂರ್ವಕ ಅಂತ್ಯಕ್ರಿಯೆಗೂ ಅವಕಾಶ ನೀಡದೆ, ಹೆತ್ತವರನ್ನು ಗೋಳಾಡಿಸಿದ ಯೋಗಿ ಆದಿತ್ಯನಾಥ್, ಕಾವಿಧಾರಿಗಳ ಪಾಲಿನ ಕಳಂಕ. ಮೊದಲು ಅಧಿಕಾರದಿಂದ ಕಿತ್ತುಹಾಕಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.