ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಜನಪ್ರತಿನಿಧಿಗಳಿಗೆ ಕೊರೋನಾ ಸೋಂಕು ತಗುಲಿತ್ತು. ಇದೀಗ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು, ಕೋವಿಡ್ 19 ಧೃಢ ಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ನಾನು ಇನ್ನು ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಇರುತ್ತೇನೆ. ಯಾವುದೇ ಲಕ್ಷಣವಿಲ್ಲದಿರುವುದರಿಂದ ಯಾವುದೇ ರೀತಿ ಆತಂಕವಿಲ್ಲ ಎಂಬುದಾಗಿ ತಿಳಿಸಿದ್ದಾರೆ.
ಕೋವಿಡ್ 19 ಧೃಢ ಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ನಾನು ಇನ್ನು ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಇರುತ್ತೇನೆ.
ಯಾವುದೇ ಲಕ್ಷಣವಿಲ್ಲದಿರುವುದರಿಂದ ಯಾವುದೇ ರೀತಿ ಆತಂಕ ವಿಲ್ಲ.
— S.Suresh Kumar, Minister – Govt of Karnataka (@nimmasuresh) October 5, 2020